ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮಂಡಕ್ಕಿ ಭಟ್ಟಿ ಸ್ಥಳಾಂತರಕ್ಕೆ ಸಮಿತಿ - ಮುಖ್ಯಮಂತ್ರಿ

ಗೃಹ ಕಚೇರಿ ಕೃಷ್ಣಾ (ಬೆಂಗಳೂರು), ಜೂನ್ 07, 2019

-ದಾವಣಗೆರೆ ಮತ್ತು ಹರಿಹರದ ಮಂಡಕ್ಕಿ ಭಟ್ಟಿಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಪರ್ಯಾಯ ಜಾಗ ಗುರುತಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ರಚಿಸಲಾಗಿದ್ದು, ಇನ್ನು 15 ದಿನಗಳೊಳಗೆ ವರದಿ ಸಲ್ಲಿಸಲು ತಿಳಿಸಲಾಗಿದೆ.

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಮುಜರಾಯಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ, ಶಾಸಕರಾದ ಶಾಮನೂರು ಶಿವಶಂಕರಪ್ಪ ಮತ್ತಿತರರು ಭಾಗವಹಿಸಿದ್ದರು.

-ದಾವಣಗೆರೆ ಹರಿಹರ ಭಾಗಗಳಲ್ಲಿ ಸಹಸ್ರಾರು ಮಂದಿ ಮಂಡಕ್ಕಿ ಭಟ್ಟಿಗಳನ್ನು ಅವಲಂಬಿಸಿ ಬದುಕು ಸಾಗಿಸುತ್ತಿದ್ದಾರೆ. ಕಡುಬಡತನದಲ್ಲಿರುವ ಅವರಿಗೆ ಸೂಕ್ತ ನೆಲೆ ಇರುವುದಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡು ಅವರಿಗೆ ಸೂಕ್ತ ಪರ್ಯಾಯ ನೆಲೆ ಒದಗಿಸಬೇಕೆಂದು ಸಭೆಯಲ್ಲಿ ಭಾಗವಹಿಸಿದ್ದವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

-ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 15 ದಿನಗಳ ಒಳಗಾಗಿ ಸ್ಥಳ ಗುರುತಿಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

-ಇದಕ್ಕೆ ಪೂರಕವಾಗಿ ಸ್ಥಳೀಯ ಶಾಸಕರನ್ನು ಒಳಗೊಂಡ ಸಮಿತಿಯನ್ನು ರಚಿಸುವಂತೆ ತಿಳಿಸಿದರು.

*********************************