ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಗ್ರಾಮವಾಸ್ತವ್ಯ ಸಿದ್ಧತಾ ಸಭೆ....

ಗೃಹ ಕಚೇರಿ ಕೃಷ್ಣಾ (ಬೆಂಗಳೂರು), ಜೂನ್ 07, 2019

-ಗ್ರಾಮವಾಸ್ತವ್ಯವನ್ನು ಪುನರಾರಂಭಿಸಿರುವ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶಕ್ಕೇ ಮಾದರಿಯಾಗುವಂತಹ ಕಾರ್ಯಕ್ರಮ ಇದಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

-ಗ್ರಾಮ ವಾಸ್ತವ್ಯದ ಪೂರ್ವ ಸಿದ್ಧತೆಗಳ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು.

-ಸಭೆಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯದ ಮೂಲಕ ಈಗಾಗಲೇ ಜನಪ್ರಿಯರಾಗಿದ್ದಾರೆ. ಹೈದರಾಬಾದ್ ಕರ್ನಾಟಕ ಮೂಲಕ ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಿರುವುದು ಸ್ವಾಗತಾರ್ಹ. ಮುಖ್ಯಮಂತ್ರಿಗಳು ವಾಸ್ತವ್ಯ ಮಾಡುವ ಗ್ರಾಮದ ಜೊತೆಗೆ ಸುತ್ತಮುತ್ತಲಿನ ಗ್ರಾಮಗಳ ಶಾಲೆಗಳಿಗೂ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

-ಸಭೆಯಲ್ಲಿ ಹಾಜರಿದ್ದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿ, ಗ್ರಾಮ ವಾಸ್ತವ್ಯ ಒಂದು ವಿನೂತನವಾದ ಕಾರ್ಯಕ್ರಮ. ಜನರೊಂದಿಗೆ ನೇರ ಸಂಪರ್ಕಕ್ಕೆ ಇದು ಸಹಾಯಕ. ಈ ಹಿಂದೆ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಹಲವು ಯೋಜನೆಗಳು ರೂಪುಗೊಂಡಿದ್ದವು. ಜನರ ಆಶೋತ್ತರಗಳನ್ನು ಈಡೇರಿಸಲು ಜಿಲ್ಲಾಡಳಿತ ಸಜ್ಜಾಗಬೇಕು ಎಂದು ನುಡಿದರು.

-ತಮ್ಮ ಗ್ರಾಮ ವಾಸ್ತವ್ಯದ ನೆನಪುಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು ಆ ಸಂದರ್ಭದಲ್ಲಿ ಅನುಷ್ಠಾನಗೊಂಡ ಹಲವು ಯೋಜನೆಗಳನ್ನು ಸಭೆಯ ಗಮನಕ್ಕೆ ತಂದರು./p>

*********************************