ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಿನಾಂಕ 12-6-2019 ಹಾಗೂ 13-06-2019 ರಂದು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಮುಖ್ಯಾಂಶಗಳು....

ವಿಧಾನಸೌಧ(ಬೆಂಗಳೂರು), ಜೂನ್ 13, 2019

-ಎರಡು ದಿನಗಳ ಕಾಲ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದಲ್ಲಿ ಭಾಗವಹಿಸಿದ್ದೆ.

-ಜಿಲ್ಲೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅರ್ಥಪೂರ್ಣ ಚರ್ಚೆ ನಡೆಯಿತು.

-ಸಭೆಯಲ್ಲಿ ಭಾಗವಹಿಸಿದ್ದ ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು, ಸಿಇಒಗಳು ಮುಕ್ತವಾಗಿ ಸಂವಾದ ನಡೆಸಿದರು.

-ಇದು ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಉತ್ಸಾಹದಿಂದ ತಮ್ಮ ಕೆಲಸದಲ್ಲಿ ತೊಡಗಿಸಿಕೊಳ್ಳಲು ನೆರವಾಗಲಿದೆ ಎನ್ನುವ ಆಶಾಭಾವ ನನ್ನದು.

-ಮುಖ್ಯಮಂತ್ರಿ-

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಿನಾಂಕ 12-6-2019 ಹಾಗೂ 13-06-2019 ರಂದು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಮುಖ್ಯಾಂಶಗಳು....

*********************************