ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮುಖ್ಯಮಂತ್ರಿಗಳೊಂದಿಗೆ ತೈವಾನ್ ಮೂಲದ ವಿಸ್ಟ್ರಾನ್ ಸಂಸ್ಥೆಯ ನಿಯೋಗ ಭೇಟಿ

ಗೃಹ ಕಚೇರಿ ಕೃಷ್ಣಾ (ಬೆಂಗಳೂರು), ಜೂನ್ 19, 2019

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ತೈವಾನ್ ಮೂಲದ ವಿಸ್ಟ್ರಾನ್ ಕಾರ್ಪೊರೇಷನ್ ಕಂಪನಿಯ ನಿರ್ದೇಶಕ ವಿ.ಲೀ ನೇತೃತ್ವದ ನಿಯೋಗ ಭೇಟಿ ಮಾಡಿತು.

-ಕೋಲಾರದ ನರಸಾಪುರದಲ್ಲಿ ಆರಂಭಿಸಲು ಉದ್ದೇಶಿಸಿರುವ 650 ಕೋಟಿ ರೂ. ಬಂಡವಾಳದ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಉತ್ಪನ್ನಗಳ ಕಂಪನಿಗೆ ಈಗಾಗಲೇ 40 ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿದ್ದು, ಬಾಕಿ 3 ಎಕರೆ ಜಮೀನು ಮಂಜೂರು ಮಾಡುವಂತೆ ಲೀ ಅವರು ಮನವಿ ಮಾಡಿದರು.

-ಈಗಾಗಲೇ ವಿಸ್ಟ್ರಾನ್ ಕಂಪನಿಯ ಒಂದು ಘಟಕ ಪೀಣ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 1500 ಜನರಿಗೆ ಉದ್ಯೋಗ ನೀಡಿದೆ ಎಂದು ಲೀ ತಿಳಿಸಿದರು. ರಾಜ್ಯ ದಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಸುವ ದೃಷ್ಟಿಯಿಂದ ಎಲ್ಲ ಸಹಕಾರ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು.

-ಕಂಪನಿಯ ಸ್ಥಳೀಯ ನಿರ್ದೇಶಕ ಸೆಂಥಿಲ್ ಕುಮಾರ್ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ವಿಸ್ಟ್ರಾನ್ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಮಂಜುನಾಥ್.ಬಿ. ಉಪಸ್ಥಿತರಿದ್ದರು.

*********************************