ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆಗಳನ್ನು ತಲುಪಿಸಿ: ಮುಖ್ಯಮಂತ್ರಿ

ವಿಧಾನಸೌಧ(ಬೆಂಗಳೂರು), ಜೂನ್ 20, 2019

-ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ವಸತಿ ಇಲಾಖೆ ಯೋಜನೆಗಳ ಪರಿಶೀಲನಾ ಸಭೆ ನಡೆಯಿತು.

-ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆಯ ಲಾಭವನ್ನು ತಲುಪಿಸಿ ಎಂದು ವಸತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

-ಬಡತನ ರೇಖೆಗಿಂತ ಕೆಳಗಿರುವವರಿಗಾಗಿ ರಾಜ್ಯದಲ್ಲಿ 2001 ರಿಂದ ಈವರೆಗೆ 42.37 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ.

-ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ 7 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ವಸತಿ ಇಲಾಖೆ ಅಧಿಕಾರಿಗಳು ತಿಳಿಸಿದರು.

-ವಸತಿ ಸಚಿವ ಎಂ.ಟಿ.ಬಿ.ನಾಗರಾಜ್, ಕರ್ನಾಟಕ ವಸತಿ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಅನ್ಬುಕುಮಾರ್, ವಸತಿ ಇಲಾಖೆ ಕಾರ್ಯದರ್ಶಿ ಜೆ.ರವಿಶಂಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಉಪಸ್ಥಿತರಿದ್ದರು.

*********************************