ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಚಂಡ್ರಕಿ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಪ್ರಮುಖ ನಿರ್ಧಾರಗಳು:

ಚಂಡ್ರಕಿ(ಯಾದಗಿರಿ), ಜೂನ್ 21, 2019

ಚಂಡ್ರಕಿ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಪ್ರಮುಖ ನಿರ್ಧಾರಗಳು:

-1.ಚಂಡ್ರಕಿ ಗ್ರಾಮಕ್ಕೆ ಸಂಪರ್ಕ ರಸ್ತೆ ಕಲ್ಪಿಸಲು ಎಚ್ಕೆಆರ್ಡಿಬಿ ವತಿಯಿಂದ 25 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.

-2.ಚಂಡ್ರಕಿ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ 1.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

-3.ಚಂಡ್ರಕಿಯ ಎಲ್ಲಾ ಶಾಲೆಗಳನ್ನು ಲಭ್ಯ ಹಣದಲ್ಲಿ ದುರಸ್ತಿಗೊಳಿಸಲಾಗಿದೆ.

-4.ಚಂಡ್ರಕಿ ಸೇರಿದಂತೆ ಗುರುಮಠಕಲ್ ತಾಲ್ಲೂಕಿನ 32 ಗ್ರಾಮಗಳಿಗೆ ಭೀಮಾ ನದಿಯಿಂದ ಕುಡಿಯುವ ನೀರು ಕಲ್ಪಿಸುವ ಯೋಜನೆ ಚಾಲನೆಗೊಳಿಸಲಾಗಿದೆ.

-5.ಚಂಡ್ರಕಿ ಗ್ರಾಮ ಸಂತೆ ಅಭಿವೃದ್ಧಿಗೆ 1 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಯಾದಗಿರಿ ಜಿಲ್ಲೆಗೆ ಸಂಬಂಧಿಸಿದ ವಿಷಯಗಳು:

-1.ಯಾದಗಿರಿ ಜಿಲ್ಲಾ ಆಸ್ಪತ್ರೆಯನ್ನು 100 ಬೆಡ್ನಿಂದ 300 ಬೆಡ್ಗೆ ಪರಿವರ್ತಿಸಲು ನಿರ್ದೇಶಿಸಲಾಗಿದೆ.

-2.ಯಾದಗಿರಿ ಜಿಲ್ಲಾ ಆಸ್ಪತೆಗೆ ಸಂಪರ್ಕ ರಸ್ತೆ ಕಲ್ಪಿಸಲು 1.5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

-3.ಕಡೇಚೂರು- ಬಾಡಿಯಾಳ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗಾಗಿ ತಕ್ಷಣ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸೂಚನೆ ನೀಡಲಾಗಿದೆ.

-4.ಯಾದಗಿರಿ ನಗರದದಲ್ಲಿ ಅಪೂರ್ಣವಾಗಿರುವ ಯುಜಿಡಿ ಕಾಮಗಾರಿಯನ್ನು ತಕ್ಷಣವೇ ಪೂರ್ಣಗೊಳಿಸಲು ಸೂಚಿಸಲಾಗಿದೆ.

-5.ಯಾದಗಿರಿ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಪ್ರತಿ ಹಳ್ಳಿಗೆ ಜಲಧಾರೆ ಯೋಜನೆಯಡಿ ನದಿಯ ಮೂಲದಿಂದ ಕುಡಿಯುವ ನೀರನ್ನು 1 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪೂರೈಸಲು ನಿರ್ದೇಶನ ನೀಡಲಾಗಿದೆ.

-6.ಮಾನ್ಯ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಹಿನ್ನೆಯಲ್ಲಿ ಕಳೆದ 10 ದಿನಗಳಿಂದ ಹೋಬಳಿ ಮಟ್ಟದಲ್ಲಿ ಕಂದಾಯ ಇಲಾಖೆಯ ಅದಾಲತ್ ನಡೆಸಲಾಗಿದ್ದು, 104 ಪಿಂಚಣಿ, 126 ಪಡಿತರ ಚೀಟಿ, 500ಕ್ಕೂ ಹೆಚ್ಚು ಪಹಣಿ ತಿದ್ದುಪಡಿ ಮಾಡಲಾಗಿದೆ.

-7.ಜನತಾದರ್ಶನದಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 7.30 ಗಂಟೆಯವರೆಗೆ ಸುಮಾರು 4000 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇನ್ನೂ ನೂರಾರು ಜನ ಸರದಿಯಲ್ಲಿದ್ದಾರೆ. ಅರ್ಜಿಗಳನ್ನು ಇಲÁಖಾವಾರು ವಿಂಗಡಿಸಿ, ಆದ್ಯತೆಯ ಮೇರೆಗೆ ಪರಿಹಾರ ನೀಡಲು ಸೂಚಿಸಲಾಗಿದೆ.

-8.ಅಂಗವಿಕಲರ ರಿಯಾಯತಿ ದರದ ಕೆಎಸ್ಆರ್ಟಿಸಿ ಬಸ್ ಪಾಸ್ ಮುಂದುವರೆಸಲು ಸೂಚಿಸಲಾಗಿದೆ.

-9.ಜನತಾದರ್ಶನದಲ್ಲಿ ಪಹಣಿ ತಿದ್ದುಪಡಿ, ವೈದ್ಯಕೀಯ ಚಿಕಿತ್ಸಾ ವೆಚ್ಚ, ವಿದ್ಯುತ್ ಪರಿವರ್ತಕಗಳ ಬದಲಾವಣೆ, ಸಾಲಮನ್ನಾ, ಸಾಮಾಜಿಕ ಭದ್ರತೆ ಯೋಜನೆಗಳಿಗೆ ಸಂಬಂಧಿಸಿದಂತೆ ಬಂದ ಸುಮಾರು 2 ಸಾವಿರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲು ಸೂಚಿಸಲಾಗಿದೆ.

-10.ಅಪಘಾತದಲ್ಲಿ ಗಾಯಗೊಂಡಿರುವ ಮುನಗಲ್ ಗ್ರಾಮದ ಇಂಜಿನಿಯರಿಂಗ್ ಪದವೀಧರ ಭೀಮರೆಡ್ಡಿ ಶಂಕರಪ್ಪ ಅವರಿಗೆ ತಕ್ಷಣ 5 ಲಕ್ಷ ರೂ.ಗಳ ಪರಿಹಾರ ಒದಗಿಸಲು ಸೂಚಿಸಲಾಗಿದೆ.

-11.ಸ್ಥಳೀಯ ಶಾಸಕರೂ ಆದ ನಾಗನಗೌಡ ಕಂದಕೂರ ಅವರು ವೈಯಕ್ತಿಕ ಕಾಳಜಿಯನ್ನು ತೋರಿ ಈ ಗ್ರಾಮ ವಾಸ್ತವ್ಯವನ್ನು ಏರ್ಪಡಿಸಿದ್ದಾರೆ. ಅವರಿಗೆ ಸರ್ಕಾರದ ಪರವಾಗಿ ಅಭಿನಂದನೆಗಳು.

-ಜಿಲ್ಲಾ ಉಸ್ತುವಾರಿ ಸಚಿವರಾದ ರಾಜಶೇಖರ ಪಾಟೀಲ್, ಸಮಾಜ ಕಲ್ಯಾಣ ಸಚಿವರಾದ ಪ್ರಿಯಾಂಕ್ ಎಂ.ಖರ್ಗೆ, ಸಹಕಾರ ಸಚಿವರಾದ ಬಂಡೆಪ್ಪ ಖಾಶೆಂಪೂರ, ಪಶುಸಂಗಪನಾ ಸಚಿವರಾದ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೆಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ ಅವರು ಜನತಾದರ್ಶನ ಯಶಸ್ವಿಗೊಳ್ಳಲು ಶ್ರಮಿಸಿದ್ದಾರೆ. ಅವರಿಗೆ ಕೃತಜ್ಞತೆಗಳು.

-ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಸೆಲ್ವಕುಮಾರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್ಕುಮಾರ್, ಪ್ರಾದೇಶಿಕ ಆಯುಕ್ತರಾದ ಸುಬೋಧ ಯಾದವ್, ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಕಳೆದ 15 ದಿನಗಳಿಂದ ತಮ್ಮ ಎಲ್ಲಾ ಇಲಾಖೆಯ ಸಿಬ್ಬಂದಿಯ ಸಹಕಾರದಿಂದ ಗ್ರಾಮ ವಾಸ್ತವ್ಯ ಹಾಗೂ ಜನತಾದರ್ಶನ ಏರ್ಪಡಿಸಿದ್ದಾರೆ.

*********************************