ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಐಟಿಐಗಳಿಗೆ ಕೈಗಾರಿಕೋದ್ಯಮಿಗಳನ್ನೊಳಗೊಂಡ ಸಲಹಾ ಸಮಿತಿ ರಚನೆ: ಮುಖ್ಯಮಂತ್ರಿ ಸೂಚನೆ

know_the_cm

(ಗೃಹ ಕಚೇರಿ ಕೃಷ್ಣಾ, ಬೆಂಗಳೂರು), ಜೂನ್ 17, 2020

-ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಸಲಹಾ ಸಮಿತಿ ರಚಿಸಿ, ಕೈಗಾರಿಕಾ ವಲಯದ ತಜ್ಞರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

-ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

-ಇದರಿಂದ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತಿ ಗುಣಮಟ್ಟ ಹೆಚ್ಚುವುದಲ್ಲದೆ, ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಸಹ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

-ರಾಜ್ಯದಲ್ಲಿ ಪ್ರಸ್ತುತ 112 ಐಟಿಐಗಳು ಕೈಗಾರಿಕೆಗಳೊಂದಿಗೆ ಕೈಜೋಡಿಸಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಸ್ಥೆಗಳು ಕೈಗಾರಿಕಾ ಸಂಸ್ಥೆಗಳ ಸಹಯೋಗದೊಂದಿಗೆ ಕೈಗಾರಿಕಾ ವಲಯಗಳಲ್ಲಿ ಬೇಡಿಕೆ ಇರುವ ವಿಷಯಗಳ ಕುರಿತು ತರಬೇತಿ ನೀಡಲು ಆದ್ಯತೆ ನೀಡುವಂತೆ ಸಲಹೆ ನೀಡಿದರು.

-ಇಲಾಖೆಯ ಕಾರ್ಯಕ್ರಮಗಳಡಿ ಪ್ರಸಕ್ತ ವರ್ಷದಲ್ಲಿ ಕೈಗಾರಿಕೆಗಳ ಬೇಡಿಕೆಗೆ ಅನುಗುಣವಾದ ತರಬೇತಿಯನ್ನು ನೀಡುವ ಮೂಲಕ ಉದ್ಯೋಗಾವಕಾಶ ದೊರೆಯುವ ಸಾಧ್ಯತೆಗಳನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

-ಕೋವಿಡ್ ನಂತರ ಹೊರದೇಶ ಹಾಗೂ ಹೊರರಾಜ್ಯಗಳಿಂದ ಹಿಂತಿರುಗಿರುವ ರಾಜ್ಯದ ಜನರ ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ಅವರ ವಿವರಗಳನ್ನುಇಲಾಖೆಯು ನೋಂದಣಿ ಮಾಡಿಕೊಳ್ಳುತ್ತಿದ್ದು, ಈ ವರೆಗೆ ಸುಮಾರು 41 ಸಾವಿರ ಜನ ನೋಂದಣಿ ಮಾಡಿಕೊಂಡಿದ್ದಾರೆ. ಕೃಷಿ, ಪ್ರವಾಸೋದ್ಯಮ ಮತ್ತು ನಿರ್ಮಾಣ ಚಟುವಟಿಕೆ ವಲಯಗಳಲ್ಲಿ ತರಬೇತಿಗೆ ಹಾಗೂ ಉದ್ಯೋಗಾವಕಾಶಕ್ಕೆ ಹೆಚ್ಚಿನ ಬೇಡಿಕೆ ಸಲ್ಲಿಸಿದ್ದಾರೆ.

ಕೋವಿಡ್ 19 ನಿರ್ವಹಣೆ

-ಕೋವಿಡ್ 19ರ ವಿರುದ್ಧದ ಹೋರಾಟದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಮುಖ ಪಾತ್ರ ವಹಿಸಿದ್ದು, ಇದರಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಆದಾಯ ಉತ್ಪನ್ನವೂ ಆಗಿದೆ.

-ಸ್ವಸಹಾಯ ಗುಂಪುಗಳು ಮಾಸ್ಕ್, ಸ್ಯಾನಿಟೈಸರ್, ಫೆನಾಯಿಲ್, ಪ್ರೊಟೆಕ್ಟಿವ್ ಗೌನ್ಸ್, ಹೆಡ್ ಗೇರ್ಸ್, ಮೊದಲಾದವುಗಳನ್ನು ತಯಾರಿಸಿ, ಒದಗಿಸಿದ್ದಾರೆ. ಇದರಿಂದ ಪ್ರತಿದಿನ ಸದಸ್ಯರಿಗೆ 500 ರೂ. ನಷ್ಟು ಆದಾಯ ದೊರೆತಿದೆ.

-ಜಿಟಿಟಿಸಿ ಸಂಸ್ಥೆಯ ವತಿಯಿಂದ ಮೆಡಿಕಲ್ ವೆಂಟಿಲೇಟರ್ ಗೆ ಅಗತ್ಯವಿರುವ ಬಿಡಿಭಾಗಗಳನ್ನು ತಯಾರಿಸಲಾಗುತ್ತಿದೆ.

-ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ 987 ನಗರ ವಸತಿ ರಹಿತರಿಗೆ ಲಾಕ್ ಡೌನ್ ಸಂದರ್ಭದಲ್ಲಿ ಊಟ, ಉಪಾಹಾರ ಒದಗಿಸಲಾಗಿದೆ. ಅಲ್ಲದೆ, 98 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

-ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

----------

know_the_cm

know_the_cm

know_the_cm

*************