ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ - ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಜಳಂಬ ಗ್ರಾಮ (ಬಸವಕಲ್ಯಾಣ ತಾಲ್ಲೂಕು , ಬೀದರ ಜಿಲ್ಲೆ)

ಉಜಳಂಬ(ಬೀದರ), ಜೂನ್ 27, 2019

ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ಮುಖ್ಯಮಂತ್ರಿ ಅವರು ಜನಸಂಪರ್ಕ ಸಭೆಯಲ್ಲಿ ಮಾಡಿದ ಭಾಷಣದ ಮುಖ್ಯಾಂಶಗಳು

-ಉಜಳಂಬ ಗ್ರಾಮದಲ್ಲಿ 32 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಅವರಿಂದ ಚಾಲನೆ.

-ಈ ಬಾರಿಯ ಬಜೆಟ್ ನಲ್ಲಿ ಬೀದರ ಜಿಲ್ಲೆಯಲ್ಲಿ ವಿವಿಧ ನೀರಾವರಿ ಕಾಮಗಾರಿಗಳಿಗಾಗಿ ಸಣ್ಣ ನೀರಾವರಿ ಹಾಗೂ ಜಲಸಂಪನ್ಮೂಲ ಇಲಾಖೆಗೆ 800 ಹಂಚಿಕೆ ಮಾಡಲಾಗಿದೆ.

-ಗೋದಾವರಿ ಬೇಸಿನ್ ನಿಂದ ಬೀದರ ಜಿಲ್ಲೆಗೆ 7.86 ಟಿಎಂಸಿ ನೀರು ಹಂಚಿಕೆಯಾಗಬೇಕಿದೆ ಎಂದು ಮಾಹಿತಿ ಇದ್ದು ಈ ಕುರಿತು ನಿಖರವಾದ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

-ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಘೋಷಿಸಲಾಗಿರುವ ಎಲ್ಲಾ ಕಾಮಗಾರಿಗಳನ್ನು ಆರಂಭಕ್ಕೆ ಮುಂದಿನ ಐದು ತಿಂಗಳಲ್ಲಿ ಚಾಲನೆ ನೀಡಲಾಗುವುದು.

-ಸಾಲಮನ್ನಾ ಯೋಜನೆಯಡಿ ಕಳೆದ ಎರಡು ವರ್ಷಗಳಲ್ಲಿ ಬೀದರ್ ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕುಗಳಲ್ಲಿ ಸಾವಿರದ 45 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲಾಗಿದೆ.

-ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 11785 ರೈತರ 43 ಕೋಟಿ ರೂ ಸಾಲಮನ್ನಾ ಮಾಡಲಾಗಿದೆ.

-ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ.

-ಲೋಕೋಪಯೋಗಿ ಇಲಾಖೆಗೆ 317 ಕೋಟಿ ರೂ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 89 ಕೋಟಿ ರೂ, ಪ/ಜಾತಿ ಪಂಗಡಗಳ ಅಭಿವೃದ್ಧಿಗೆ 50 ಕೋಟಿ ರೂ ನೀಡಲಾಗಿದೆ.

-ಮಾಂಜರಾ ಏತ ನೀರಾವರಿ ಮೂಲಕ 3 ಟಿಎಂಸಿ ನೀರನ್ನು ಭಾಲ್ಕಿ ಹಾಗೂ ಬಸವಕಲ್ಯಾಣ ತಾಲೂಕಿನ ಕೆರೆಗಳನ್ನು ತುಂಬಿಸಲು 75 ಕೋಟಿ ರೂ ಈಗಾಗಲೇ ಬಿಡುಗಡೆ ಮಾಡಲಾಗಿದೆ.

-ಬೀದರ ಮೆಡಿಕಲ್ ಕಾಲೇಜು ಕಟ್ಟಡ ಕಳಪೆ ಕಾಮಗಾರಿ ಕುರಿತು ಹಲವಾರು ದೂರುಗಳು ಬಂದಿವೆ. ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸುಸಜ್ಜಿತ ಗೊಳಿಸಲು 150ರಿಂದ 200 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು.

-ಬಜೆಟ್ನಲ್ಲಿ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2,000 ಕೋಟಿ ರೂಪಾಯಿ ಮಾಡಲಾಗಿದೆ.

-ಗ್ರಾಮ ವಾಸ್ತವ್ಯದಲ್ಲಿ ಸ್ವೀಕರಿಸುವ ಎಲ್ಲಾ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗುತ್ತಿದೆ.

-ಹೈದರಾಬಾದ್ ಕರ್ನಾಟಕದ ಎಲ್ಲಾ ಜಿಲ್ಲೆಗಳ ಶಾಲೆಗಳ ಸ್ಥಿತಿಗತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕ್ರಮ ಕಐಗೂಳ್ಳಲಾಗುತ್ತಿದೆ. ಪ್ರತಿ ಶಾಲೆಯ ಪರಿಸ್ಥಿತಿ, ಕಟ್ಟಡಗಳು, ಶಿಕ್ಷಕರ ಕೊರತೆ ಇತ್ಯಾದಿ ಮಾಹಿತಿಗಳನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

-ರಾಜ್ಯದ ಎಲ್ಲಾ 30 ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ. ನಮ್ಮ ಸರಕಾರ ಯಾವುದೇ ಒಂದು ಭಾಗಕ್ಕೆ ಮಾತ್ರ ಸೀಮಿತವಾಗಿಲ್ಲ.

-ಮೈತ್ರಿ ಸರಕಾರ ಒಂದೆರಡು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಕೆಲವರು ಅಸೂಯೆಯಿಂದ ಆರೋಪ ಮಾಡುತ್ತಿದ್ದಾರೆ.

- ಗ್ರಾಮ ವಾಸ್ತವ್ಯದ ಸಂದರ್ಭ ದಲ್ಲಿ ಯಾದಗಿರಿ ಮತ್ತು ರಾಯಚೂರಿನಲ್ಲಿ ಸಾವಿರಾರು ಕೋಟಿ ರುಪಾಯಿಗಳ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.

-ಕೃಷಿ ಪದ್ಧತಿಯಲ್ಲಿ ಬದಲಾವಣೆಯನ್ನು ಮಾಡಬೇಕಾಗಿದೆ . ಸರ್ಕಾರದ ಸಬ್ಸಿಡಿ ಯೋಜನೆಗಳನ್ನು ಬಳಸಿಕೊಂಡು ಕೃಷಿ ಪದ್ಧತಿಯನ್ನು ಲಾಭದಾಯಕವನ್ನಾಗಿ ಮಾಡಬಹುದಾಗಿದೆ.

-ಕಾಯಕ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ ಐದು ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಶೇ. 4ರ ಬಡ್ಡಿದರದಲ್ಲಿ 10ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ.

-ಸಂಧ್ಯಾ ಸುರಕ್ಷಾ ಯೋಜನೆಯಡಿ ಮುಂದಿನ ವರ್ಷದಿಂದ 2000 ರೂ ಪಿಂಚಣಿ ನೀಡಲಾಗುವುದು.

-ವಿಧವಾ ವೇತನ ಹಾಗೂ ಅಂಗವಿಕಲರ ವೇತನವನ್ನು 2500 ಕ್ಕೆ ಏರಿಕೆ ಮಾಡಲಾಗುವುದು.

-ಎಲ್ಲಾ ಸಮುದಾಯದವರ ಆರ್ಥಿಕ ಹಾಗೂ ಶೈಕ್ಷಣಿಕ ಭದ್ರತೆಗೆ ಸರಕಾರ ಬದ್ಧವಾಗಿದೆ.

ಉಜಳಂಬ ಗ್ರಾಮದಲ್ಲಿ ಜನಸಂಪರ್ಕ ಸಭೆ ಬಳಿಕ ಮುಖ್ಯಮಂತ್ರಿ ಅವರ ಸುದ್ದಿಗೋಷ್ಠಿಯ ಸಾರಾಂಶ...

-4 ಸಾವಿರಕ್ಕೂ ಅಧಿಕ ಅರ್ಜಿಗಳ ಸ್ವೀಕಾರ.

-ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲಿ ಪರಿಹಾರ ಸೂಚಿಸಲಾಗಿದೆ. ಉಳಿದ ಎಲ್ಲಾ ಮನವಿಗಳಿಗೆ ಕಾಲಮಿತಿಯ ಒಳಗಾಗಿ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

-ಬೀದರ ನಗರದಲ್ಲಿ ಕನ್ನಡ ಭವನ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ರುಪಾಯಿ ನೆರವು ನೀಡಲಾಗುವುದು.

-ತುಳಜಾಪುರ ಧಾರ್ಮಿಕ ಕ್ಷೇತ್ರದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ಅನುದಾನ.

-ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸಲು, ಕಾರಂಜಾ ಸಂತ್ರಸ್ತರ ಸಮಸ್ಯೆಯನ್ನು ಬಗೆಹರಿಸಲು ಮನವಿಗಳು ಬಂದಿದೆ. ಈ ಕುರಿತು ಹಣಕಾಸು ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆಯನ್ನು ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.

-ಮುಂದಿನ ನಾಲ್ಕೈದು ತಿಂಗಳುಗಳ ಒಳಗಾಗಿ ಎಲ್ಲಾ 30 ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ನಡೆಸಲಾಗುವುದು.

-ಈ ಎಲ್ಲ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿರುವ ಅನುದಾನಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗುವುದು ಮಾತ್ರವಲ್ಲದೆ ಎಲ್ಲಾ ಕಾಮಗಾರಿಗಳನ್ನು ತಕ್ಷಣ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

-ಔರಾದ್ಕರ್ ವರದಿ ಜಾರಿ ಕುರಿತಾಗಿ ಈಗಾಗಲೇ ಹಣಕಾಸು ಇಲಾಖೆ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಭೆ ನಡೆಸಲಾಗಿದೆ. ಈ ಕುರಿತು ಮುಂದಿನ ಹತ್ತು ಹದಿನೈದು ದಿನಗಳ ಒಳಗಾಗಿ ತೀರ್ಮಾನವನ್ನು ಕೈಗೊಳ್ಳಲಾಗುವುದು.

-----------------------------

ವಿಕಲಚೇತನರ ಅಹವಾಲು: ಸ್ಥಳದಲ್ಲೇ ಪರಿಹಾರ ನೀಡಿದ ಮುಖ್ಯಮಂತ್ರಿಗಳು

-ಮಾನ್ಯ ಮುಖ್ಯಮಂತ್ರಿಗಳು ಎಚ್ ಡಿ ಕುಮಾರಸ್ವಾಮಿ ಅವರು ಜೂನ್ 27ರಂದು ಬೀದರನಲ್ಲಿ ನಡೆದ ಜನತಾ ದರ್ಶನದಲ್ಲಿ ವಿಕಲಚೇತನರು ಹಾಗೂ ಪೋಷಕರ ಅಹವಾಲುಗಳನ್ನು ಆಲಿಸಿದರು.

-ವಿಕಲಚೇತನ ಸಹೋದರನೊಂದಿಗೆ ಆಗಮಿಸಿದ ವಿದ್ಯಾರ್ಥಿನಿಯೊಬ್ಬಳು ತನ್ನ ತಮ್ಮನ ಆರೋಗ್ಯಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಬೇಕು. ನಾನು ಪಿಯುಸಿನಲ್ಲಿ ಶೇ. 94ರಷ್ಟು ಅಂಕಪಡೆದು ತೇರ್ಗಡೆಯಾಗಿದ್ದು, ಕೃಷಿ ಪದವಿಯಲ್ಲಿ ಅಧ್ಯಯನ ಮಾಡಲು ಅವಕಾಶ ನೀಡಿ ಎಂದು ಕೋರಿದಳು. ಸೋದರ ಸೋದರಿಯರ ಸಂಕಷ್ಟಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಬಿಎಸ್ ಸಿ ಪದವಿ ಓದಿಸಲು ಅಗತ್ಯ ನೆರವು ನೀಡುವುದಾಗಿ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಜೊತೆಗೆ ಅವರಿಗೆ ಎರಡು ಲಕ್ಷ ರೂ ಬಿಡುಗಡೆ ಮಾಡಿದರು.

-ಚಿಕಿತ್ಸೆಗೆ ಸೂಚನೆ

-ಕಿಡ್ನಿ ವೈಫಲ್ಯ, ಹೃದಯ ಕಾಯಿಲೆ ಇರುವವರ ಅಹವಾಲು ಆಲಿಸಿದ ಮುಖ್ಯಮಂತ್ರಿಯವರು, ಜಯದೇವ ಮತ್ತು ನೆಪ್ರೋ ಯುರಾಲಜಿ ಇನಸ್ಟಿಟ್ಯೂಟ್ ಗಳ ನಿರ್ದೇಶಕರಿಗೆ ದೂರವಾಣಿ ಮೂಲಕ ಮಾತನಾಡಿ ಅಗತ್ಯ ಚಿಕಿತ್ಸೆ ಕೊಡಲು ಸೂಚಿಸಿದರು.

-ಆರು ಜನರಿಗೆ ಅಂಗವಿಕಲರ ಪರಿಹಾರ ನಿಧಿಯಲ್ಲಿ ಪರಿಹಾರ ಘೋಷಣೆ ಮಾಡಿದರು.

-----------------------------

ಬಸವಕಲ್ಯಾಣ(ಬೀದರ), ಜೂನ್ 27, 2019

ಬಸವಕಲ್ಯಾಣಕ್ಕೆ ಭೇಟಿ ನೀಡಿ ಮನೆ ಕುಸಿತದಿಂದ ಮೃತಪಟ್ಟಿರುವ ಕುಟುಂಬದ ಸದಸ್ಯರಿಗೆ ಸಾಂತ್ವನ

-ಬಸವಕಲ್ಯಾಣದ ಛಿಲ್ಲಾ ಗಲ್ಲಿಯಲ್ಲಿ ಬುಧವಾರ ಮಳೆಯಿಂದಾಗಿ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ 6 ಜನರು ಮೃತಪಟ್ಟ ಮನೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಭೇಟಿ ನೀಡಿದರು.

-ಅವರ ಕುಟುಂಬದ ಮುಖ್ಯಸ್ಥರಾದ ಇಸೂಫ್ ಬಕರೆ ವಾಲೆ ಅವರಿಗೆ ಮುಖ್ಯಮಂತ್ರಿಗಳು 24 ಲಕ್ಷ ರೂ.ಗಳ ಚೆಕ್ಕುಗಳನ್ನು ವಿತರಿಸಿದರು.

-ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ್ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸುಮಾರು 100 ವರ್ಷಕ್ಕೂ ಹಳೆಯದಾದ ಇಂತಹ ನೂರಾರು ಮನೆಗಳು ಇರುವ ಬಗ್ಗೆ ಮಾಹಿತಿ ದೊರೆತಿದ್ದು ಅಂತಹ ಮನೆಗಳ ಸಮೀಕ್ಷೆಯನ್ನು ನಡೆಸಿ ವರದಿಯನ್ನು ಸಲ್ಲಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದೇನೆ.

-ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಬೀದರ ಜಿಲ್ಲೆಯಲ್ಲಿ ಮನೆಗಳ ನಿರ್ಮಾಣಕ್ಕೆ ಆದ್ಯತೆಯನ್ನು ನೀಡಲಾಗುವುದು. ಬಸವಕಲ್ಯಾಣ ತಾಲೂಕಿನಲ್ಲಿ 2 ಸಾವಿರ ಮನೆಗಳ ನಿರ್ಮಾಣಕ್ಕೆ ಆದೇಶಿಸಿದ್ದೇನೆ ಎಂದರು.

-ಸಚಿವರಾದ ಬಂಡೆಪ್ಪ ಕಾಶೆಂಪೂರ್, ರಾಜಶೇಖರ ಪಾಟೀಲ್, ರಹೀಂಖಾನ್, ಶಾಸಕ ಬಿ. ನಾರಾಯಣ ರಾವ್ ಮತ್ತಿತರರು ಉಪಸ್ಥಿತರಿದ್ದರು.

-----------------------------

(ಕಲಬುರಗಿ), ಜೂನ್ 27, 2019

ಮುಖ್ಯಮಂತ್ರಿ ಅವರು ಕಲಬುರಗಿಯ ಐವಾನ್ ಶಾಹಿ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

-ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಅವರು ಕಲಬುರಗಿಯ ಐವಾನ್ ಶಾಹಿ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

-ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಜೊತೆಗಿದ್ದರು.

-----------------------------

ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ

-ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಕಲಬುರಗಿಯಲ್ಲಿ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

-ಕಲಬುರ್ಗಿ ಜಿಲ್ಲೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆ, ಕಲಬುರ್ಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಕಲಬುರ್ಗಿ ಜಿಲ್ಲೆಯ ಬರ ಪರಿಹಾರ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಸೂಕ್ತ ಮಾರ್ಗದರ್ಶನ ನೀಡಿದರು.

-ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ, ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್, ಐ.ಜಿ.ಪಿ. ಮನೀಶ್ ಕರ್ಬಿಕರ್, ಜಿಲ್ಲಾಧಿಕಾರಿ ಆರ್. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಾಜಾ ಪಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಾಲ್ಗೊಂಡಿದ್ದರು.

-----------------------------

ಹೈದರಾಬಾದ್ ಕರ್ನಾಟಕ ಭಾಗದ ಯುವಕರ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ದೂರದೃಷ್ಟಿ ಹೊಂದಿದೆ - ಮುಖ್ಯಮಂತ್ರಿ

-ಹೈದರಾಬಾದ್ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಯುವಕರ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ದೂರದೃಷ್ಟಿ ಹೊಂದಿದೆ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದರು.

-ಅವರು ಕಲಬುರಗಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಹೈ.ಕ. ಭಾಗದ ಎಲ್ಲ ಜಿಲ್ಲೆಗಳಲ್ಲಿ ಅವಶ್ಯಕವಿರುವ ಶಾಲಾ ಕೊಠಡಿಗಳ ಮಾಹಿತಿಯನ್ನು ಪಡೆಯಲಾಗಿದೆ. ಮುಂದಿನ 8-10 ದಿನಗಳಲ್ಲಿ ಸಭೆ ಕರೆದು ಎಲ್ಲ ಶಾಲೆಗಳ ದುರಸ್ತಿ, ಹೆಚ್ಚುವರಿ ಕಟ್ಟಡ ಮತ್ತು ಶಿಕ್ಷಕರ ಕೊರತೆ ನೀಗಿಸುವಲ್ಲಿ ಸೂಕ್ತ ನಿರ್ದೇಶನ ನೀಡಲಾಗುವುದು .ಹೈ.ಕ. ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಸಿಗುವ ಹಾಗೆ ಕ್ರಮ ಕೈಗೊಳ್ಳಲಾಗುವುದು. ಈ ವರ್ಷ ಬೇರೆ ಜಿಲ್ಲೆಗಳಿಗೆ ಹೋಲಿಕೆಯಾಗುವ ಹಾಗೆ ಹೈ.ಕ. ಭಾಗದ ಜಿಲ್ಲೆಯ ಫಲಿತಾಂಶವೂ ಹೆಚ್ಚಿಸುವಲ್ಲಿ ಅಗತ್ಯ ಕ್ರಮ ಜರುಗಿಸಲಾಗುವುದು ಎಂದರು.

-ಈ ಹಿಂದೆ ಕಲಬುರಗಿ ಜಿಲ್ಲೆಯ ಹೇರೂರ ಬಿ. ಗ್ರಾಮದಲ್ಲಿ ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಮಳೆಯಿಂದಾಗಿ ಮುಂದೂಡಲ್ಪಟ್ಟಿತ್ತು ಈ ಗ್ರಾಮದಲ್ಲಿ ಸುಮಾರು 500 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದ್ದು , ಗ್ರಾಮದ ಅಭಿವೃದ್ಧಿಗೆ ಕ್ರಮ ಜರುಗಿಸಲಾಗಿದೆ. ಗ್ರಾಮ ವಾಸ್ತವ್ಯ ಮಾಡುವ ಹಳ್ಳಿಗಳಲ್ಲಿದೆ ಎಲ್ಲ ಹಳ್ಳಿಗಳಲ್ಲಿಯೂ ಮೂಲ ಭೂತ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಜರುಗಿಸಲಾಗುವುದು. ಗ್ರಾಮ ವಾಸ್ತವ್ಯದ ಮೂಲಕ ಮೈತ್ರಿ ಸರಕಾರವನ್ನು ಜನರ ಹತ್ತಿರಕ್ಕೆ ಕರೆದುಕೊಂಡು ಹೋಗಲು ಪ್ರಯತ್ನಿಸಲಾಗುತ್ತಿದೆ ಈಗಾಗಲೇ ಎರಡು ಗ್ರಾಮ ವಾಸ್ತವ್ಯ ಗಳು ಪೂರ್ಣಗೊಂಡಿವೆ ಎಂದರು.

*********************************