ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪರಿಸರಪ್ರೇಮಿ ಕಾಮೇಗೌಡರಿಗೆ ಜೀವತಾವಧಿ ಉಚಿತ ಬಸ್ ಪಾಸ್

know_the_cm

(ಬೆಂಗಳೂರು), ಜುಲೈ 02, 2020

ಅಪರೂಪದ ಪರಿಸರ ಕಾಳಜಿಯ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರಿಗೆ, ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜೀವಿತಾವಧಿ ಉಚಿತ ಬಸ್ ಪಾಸ್ ನೀಡಿದೆ.

-ಮಾಧ್ಯಮವೊಂದರಲ್ಲಿ ಈ ಬಗ್ಗೆ ತಮ್ಮ ಆಸೆ ವ್ಯಕ್ತಪಡಿಸಿದ್ದ ಕಾಮೇಗೌಡರ ಅಭಿಲಾಷೆಯಂತೆ, ಉಚಿತ ಪಾಸ್ ವಿತರಿಸಲು ಮಾನ್ಯ ಮುಖ್ಯಮಂತ್ರಿಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿದ್ದರು.

know_the_cm

-ಗೌಡರ ಪರಿಸರ ಕಾಳಜಿಗೆ ಮತ್ತೊಮ್ಮೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಕಾಮೇಗೌಡರ ಪರಿಸರ ಸೇವೆ ಬಗ್ಗೆ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ತಮ್ಮ 'ಮನ್ ಕಿ ಬಾತ್ ' ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದನ್ನು ಸ್ಮರಿಸಿಕೊಂಡಿದ್ದಾರೆ.

-ಕಾಮೇಗೌಡ ಅವರಂತಹ, ಬೆಲೆ ಕಟ್ಟಲಾಗದ ಪರಿಸರ ಕಾಳಜಿಯುಳ್ಳವರ ಸಂತತಿ ಇನ್ನೂ ಹೆಚ್ಚಾಗಲಿ ಎಂದು ಆಶಿಸುವುದಾಗಿ ತಿಳಿಸಿದ್ದಾರೆ.

*************