ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಖ್ಯಾತ ಗಾಯಕರಾದ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

know_the_cm

(ಬೆಂಗಳೂರು), ಸೆಪ್ಟೆಂಬರ್ 25, 2020

-ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆ ಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು.

-ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು.

-ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು.

-ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು.

-ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ.

-ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ.

-ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

know_the_cm

*************