ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿಗಳ ಸೂಚನೆ

ಮಾನ್ಯ ಮುಖ್ಯಮಂತ್ರಿ

ವಿಧಾನಸೌಧ (ಬೆಂಗಳೂರು), ಅಕ್ಟೋಬರ್ 01

-ರಾಜ್ಯದಲ್ಲಿ ವಿವಿಧ ಹಂತಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸೂಚನೆ ನೀಡಿದರು.

-ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಪ್ರಮುಖ ರಸ್ತೆ ಕಾಮಗಾರಿಗಳ ಯೋಜನೆಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ಕುರಿತು ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ಜರುಗಿತು.

-ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಭಾಗಿತ್ವದ 7556 ಕಿ.ಮೀ ರಸ್ತೆಯ ಪೈಕಿ 3463 ಕಿ.ಮೀ ರಸ್ತೆಯನ್ನು ಚತುಷ್ಪಥ ಮತ್ತು ಷಟ್ಪಥ ರಸ್ತೆಗಳನ್ನಾಗಿ ಪರಿವರ್ತಿಸಲು 36,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ.

-ಈ ಯೋಜನೆಗಳು ಅನುಷ್ಠಾನಕ್ಕೆ ಬರಲು ಇಂಧನ, ಅರಣ್ಯ ಹಾಗೂ ಕಂದಾಯ ಇಲಾಖೆಗಳ ಸಹಯೋಗದಲ್ಲಿ ಕೆಲಸವಾಗಬೇಕಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ತೊಡಕುಗಳನ್ನು ನಿವಾರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು ಅಗತ್ಯವಿರುವ ಕಡೆಗಳಲ್ಲಿ ರಾಜ್ಯ ಭೂಸ್ವಾಧೀನ ಅಧಿಕಾರಿಯನ್ನು ಶೀಘ್ರವಾಗಿ ನೇಮಿಸಲು ಸೂಚನೆ ನೀಡಿದರು.

-ಬೆಂಗಳೂರು, ಚಿತ್ರದುರ್ಗ, ಮಂಗಳೂರು, ಕಲಬುರ್ಗಿ, ಬಳ್ಳಾರಿ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಗೊಳಪಡುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲು ಇರುವ ಅಡೆತಡೆಗಳನ್ನು ನಿವಾರಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಲು ಸೂಚಿಸಿದರು.

-ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ , ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ, ಸಣ್ಣ ನೀರಾವರಿ ಇಲಾಖೆ ಸಚಿವ ಸಿ.ಎಸ್.ಪುಟ್ಟರಾಜು, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಭಾಗವಹಿಸಿದ್ದರು.