ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮುಖ್ಯಮಂತ್ರಿ ಅವರ ದಕ್ಷಿಣ ಕನ್ನಡ ಜಿಲ್ಲೆಯ ಭೇಟಿ………ಮುಖ್ಯಾಂಶಗಳು

ಮಾನ್ಯ ಮುಖ್ಯಮಂತ್ರಿ

ಮಂಗಳೂರು, ಅಕ್ಟೋಬರ್ 14

ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇಗುಲದಲ್ಲಿ ಜರುಗಿದ ಸಂಭ್ರಮದ ನವರಾತ್ರಿಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಉದ್ಘಾಟಿಸಿದರು.

ಮಾನ್ಯ ಮುಖ್ಯಮಂತ್ರಿ

----------------------------------------------

ಮಂಗಳೂರು, ಅಕ್ಟೋಬರ್ 14

ಮಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮಾಜ ಸುಧಾರಕ ನಾರಾಯಣ ಗುರು ಅವರಿಗೆ ನಮನ ಸಲ್ಲಿಸಿದರು.

ಮಾನ್ಯ ಮುಖ್ಯಮಂತ್ರಿ

----------------------------------------------

ಮಂಗಳೂರು, ಅಕ್ಟೋಬರ್ 14

ಮಂಗಳೂರಿನಲ್ಲಿ ಮುಖ್ಯಮಂತ್ರಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ "ಬ್ರಾಂಡ್ ಮಂಗಳೂರು" ಯೋಜನೆ ಹಾಗೂ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

-ಪತ್ರಕರ್ತರ ಕಲ್ಯಾಣಕ್ಕೆ ನೆರವಾಗುವ ಎಲ್ಲಾ ಯೋಜನೆಗಳಿಗೆ ರಾಜ್ಯ ಸರಕಾರ ಸಕಲ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

-ಮಂಗಳೂರಿನಲ್ಲಿ ಮುಖ್ಯಮಂತ್ರಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ "ಬ್ರಾಂಡ್ ಮಂಗಳೂರು" ಯೋಜನೆ ಹಾಗೂ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಮಾತನಾಡಿದರು.

-ಪತ್ರಕರ್ತರಿಗೆ ನಿವೇಶನ, ಬಸ್ ಪಾಸ್, ಅಧ್ಯಯನ ಪ್ರವಾಸ, ಕುಟುಂಬ ಪ್ರವಾಸ, ಅರೋಗ್ಯ ವಿಮೆ, ಪಿಂಚಣಿ ಒದಗಿಸುವುದು ಸರಕಾರಕ್ಕೆ ದೊಡ್ಡ ವಿಷಯವಲ್ಲ. ಈ ಬಗ್ಗೆ ಪತ್ರಕರ್ತರ ಸಂಘ ಸಲ್ಲಿಸಿರುವ ಮನವಿ ಪರಿಗಣಿಸಿ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಮಾನ್ಯ ಮುಖ್ಯಮಂತ್ರಿ

----------------------------------------------

ಮಂಗಳೂರು, ಅಕ್ಟೋಬರ್ 14

ಮಂಗಳೂರಿನಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಜಿಲ್ಲೆಯ ಹಲವು ನಾಗರಿಕರ ಅಹವಾಲನ್ನು ಆಲಿಸಿ, ಅವರ ನೋವುಗಳಿಗೆ ಪರಿಹಾರ ಒದಗಿಸಿದರು.

ಮಾನ್ಯ ಮುಖ್ಯಮಂತ್ರಿ

ಮಂಗಳೂರಿನಲ್ಲಿ ಮುಖ್ಯಮಂತ್ರಿಗಳಿಂದ ಜನತಾ ದರ್ಶನ...

-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಮುಖ್ಯಮಂತ್ರಿ ಅವರು ಜಿಲ್ಲೆಯ ಹಲವು ನಾಗರಿಕರ ಅಹವಾಲನ್ನು ಆಲಿಸಿ, ಅವರ ನೋವುಗಳಿಗೆ ಪರಿಹಾರ ಒದಗಿಸಿದರು.

-ಮುಖ್ಯಮಂತ್ರಿಗಳು ತಾವು ಭಾಗವಹಿಸಿದ್ದ ಕಾರ್ಯಕ್ರಮ ಮುಗಿಸಿ ತೆರಳುವಾಗ ತಮಗಾಗಿ ಕಾದು ಕುಳಿತಿದ್ದ ಹಿರಿಯ ನಾಗರಿಕರು, ಮಹಿಳೆಯರು, ವಿದ್ಯಾರ್ಥಿಗಳನ್ನು ನೋಡಿ ಅವರ ಬಳಿ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿದರು.

ಮಾನ್ಯ ಮುಖ್ಯಮಂತ್ರಿ

-ಸ್ಥಳದಲ್ಲಿಯೇ ಪರಿಹಾರ ಒದಗಿಸಬಹುದಾದ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇನ್ನೂ ಕೆಲವು ನಾಗರಿಕರಿಗೆ ಅವರ ಸಮಸ್ಯೆಗಳಿಗೆ ಬೆಂಗಳೂರಿಗೆ ಬಂದು ತನ್ನನ್ನು ಭೇಟಿಯಾಗುವಂತೆ ಸೂಚಿಸಿದರು.

-ಪ್ರಸ್ತುತ ಮಂಗಳೂರು ಆಕಾಶಭವನದಲ್ಲಿ ನೆಲೆಸಿರುವ ಕೊಪ್ಪಳ ಜಿಲ್ಲೆಯ ಮೂಲದ ಪುಷ್ಪಾ ಎಂಬವರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತನ್ನ ಮಗಳು ಸುಷ್ಮಿತಾಳ ಚಿಕಿತ್ಸೆಗೆ ಸಾಕಷ್ಟು ವೆಚ್ಚವಿದ್ದು, ನೆರವು ನೀಡಲು ಸಿಎಂಗೆ ಮನವಿ ಸಲ್ಲಿಸಿದರು.

-ಪ್ರಸಕ್ತ ಬೆಸೆಂಟ್ ಕಾಲೇಜ್ನಲ್ಲಿ ಪಿಯುಸಿ ಕಲಿಯುತ್ತಿರುವ ಸುಷ್ಮಿತಾ ಕ್ರೀಡೆಯಲ್ಲಿ ಸಾಕಷ್ಟು ಬಹುಮಾನ ಪಡೆದಿದ್ದು, ಅದರ ಸರ್ಟಿಫಿಕೇಟ್ ಗಳನ್ನು ತಾಯಿ ಸಿಎಂಗೆ ತೋರಿಸಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಕೂಡಲೇ ಸುಷ್ಮಿತಾಳ ಚಿಕಿತ್ಸೆ ವೆಚ್ಚದ ಅಂದಾಜು ಪಟ್ಟಿ ಪಡೆದು ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

-ಬಂಟ್ವಾಳ ತಾಲೂಕಿನ ಮೇರೆಮಜಲು ಗ್ರಾಮದ ವಿಜಯಾ ಎಂಬ ಮಹಿಳೆಯು, ತನ್ನ ವಾಸದ ಮನೆಯನ್ನು ಸ್ಥಳೀಯ ಗ್ರಾಮ ಪಂಚಾಯತ್ ಕೆಡವಿ ಹಾಕಿದ್ದು, ತನಗೆ ಯಾವುದೇ ನಿವೇಶನ ನೀಡದೆ ಬೀದಿಗೆ ಬಿದ್ದಿರುವುದಾಗಿ ಮುಖ್ಯಮಂತ್ರಿಗಳಿಗೆ ಮೊರೆ ಇಟ್ಟರು. ಈ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳಲು ಸಿಎಂ ಅಧಿಕಾರಿಗಳಿಗೆ ನಿರ್ದೇಶಿಸಿದರು.

-ನಿವೃತ್ತ ಶಿಕ್ಷಕರೊಬ್ಬರು ತನ್ನ ಮಗನಿಗೆ ಸೂಕ್ತ ಉದ್ಯೋಗ ಒದಗಿಸಲು ಮನವಿ ಮಾಡಿದರು.

ಮಾನ್ಯ ಮುಖ್ಯಮಂತ್ರಿ

-ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಂಗಳೂರಿನಲ್ಲಿ 38 ಬಡ ಕ್ಯಾನ್ಸರ್, ಕಿಡ್ನಿ, ಹೃದಯದ ಖಾಯಿಲೆಗಳಿಂದ ಬಳಲುವ ರೋಗಿಗಳಿಗೆ ನೆರವು ವಿತರಿಸಿದರು.

ಮಾನ್ಯ ಮುಖ್ಯಮಂತ್ರಿ

----------------------------------------------

ಮಂಗಳೂರು, ಅಕ್ಟೋಬರ್ 14

ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ನೂತನ ಕಚೇರಿಯನ್ನು ಮುಖ್ಯಮಂತ್ರಿ ಅವರು ಮಂಗಳೂರಿನಲ್ಲಿ ಉದ್ಘಾಟಿಸಿದರು.

ಮಾನ್ಯ ಮುಖ್ಯಮಂತ್ರಿ

----------------------------------------------

ಮಂಗಳೂರು, ಅಕ್ಟೋಬರ್ 14

ಕರ್ನಾಟಕ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರ ನೂತನ ಕಚೇರಿಯನ್ನು ಮುಖ್ಯಮಂತ್ರಿ ಅವರು ಮಂಗಳೂರಿನಲ್ಲಿ ಉದ್ಘಾಟಿಸಿದರು.

ಮಾನ್ಯ ಮುಖ್ಯಮಂತ್ರಿ

***********************************************