ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ದಿಢೀರ್ ಅನಾರೋಗ್ಯ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದು: ಮುಖ್ಯಮಂತ್ರಿ ಸ್ಪಷ್ಟನೆ

ಮಾನ್ಯ ಮುಖ್ಯಮಂತ್ರಿ

ಬೆಂಗಳೂರು, ಅಕ್ಟೋಬರ್ 24, 2018

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಮಹೋತ್ಸವದ 51ನೇ ವರ್ಷಾಚರಣೆ ಸಮಾರಂಭದಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಆದರೆ ದಿಢೀರನೆ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಈ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಧಾರ್ಮಿಕ ಕ್ಷೇತ್ರವೊಂದು ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ, ಕೃಷಿ, ಸಂಸ್ಕೃತಿ ಸಂರಕ್ಷಣೆಯಂತಹ ಸಮಾಜಮುಖಿ ಕಾರ್ಯಗಳಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಂಡಿರುವುದಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಅತ್ಯುತ್ತಮ ನಿದರ್ಶನ.

ಇಂದು ಉದ್ಘಾಟಿಸಬೇಕಿದ್ದ ಮಂಜೂಷಾ ವಸ್ತುಸಂಗ್ರಹಾಲಯವೂ ಸಮಾಜಕ್ಕೆ ಮಹತ್ತರ ಕೊಡುಗೆಯಾಗಿದೆ.

ಇವೆಲ್ಲದರ ಹಿಂದಿನ ಕರ್ತೃತ್ವ ಶಕ್ತಿ ಡಾ. ವೀರೇಂದ್ರ ಹೆಗ್ಗಡೆಯವರು. ಅವರ ಪಟ್ಟಾಭಿಷೇಕ ಮಹೋತ್ಸವದ ವಾರ್ಷಿಕೋತ್ಸವ ಸಂದರ್ಭದಲ್ಲಿ ಅವರ ಸಮಾಜಮುಖಿ ಚಟುವಟಿಕೆಗಳ ವ್ಯಾಪ್ತಿ ಇನ್ನಷ್ಟು ವಿಸ್ತರಿಸಲಿ ಎಂದು ಹಾರೈಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಡಾ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಮಹೋತ್ಸವದ 51 ನೇ ವಾರ್ಷಿಕೋತ್ಸವ ಹಾಗೂ ಜಗತ್ತಿಗೆ ರಾಮಾಯಣ ಮಹಾಕಾವ್ಯದ ಕೊಡುಗೆ ನೀಡಿದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಜಯಂತಿ ಸಮಾರಂಭದಲ್ಲಿಯೂ ಪಾಲ್ಗೊಳ್ಳಲಾಗಲಿಲ್ಲ. ಈ ಎರಡೂ ಮಹತ್ತರ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನಾರೋಗ್ಯದ ಅನಿವಾರ್ಯ ಕಾರಣದಿಂದ ಸಾಧ್ಯವಾಗಿಲ್ಲ. ಇದಕ್ಕಾಗಿ ವಿಷಾದಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

***********************************************