ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿಯವರು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

ಮಾನ್ಯ ಮುಖ್ಯಮಂತ್ರಿ

ವಿಧಾನಸೌಧ (ಬೆಂಗಳೂರು), ಅಕ್ಟೋಬರ್ 25, 2018

-ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲು ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

-ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು, ಕೆಪಿಸಿಎಲ್, ಕೆಪಿಟಿಸಿಎಲ್ ಹಾಗೂ ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯವಸ್ಥಾಪಕ ನಿರ್ದೇಶಕರು ಈ ಸಭೆಯಲ್ಲಿ ಭಾಗವಹಿಸಿದ್ದರು.

-ಪ್ರಸ್ತುತ ಯಾವುದೇ ವಿದ್ಯುತ್ ಸರಬರಾಜು ಕಂಪೆನಿಯೂ ಲೋಡ್‍ಶೆಡ್ಡಿಂಗ್ ಜಾರಿಗೆ ತಂದಿಲ್ಲ. ಮುಂದೆಯೂ ಲೋಡ್‍ಶೆಡ್ಡಿಂಗ್ ಜಾರಿ ಮಾಡದಂತೆ ಸೂಚಿಸಲಾಗಿದೆ.

-ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಒಪ್ಪಂದದಂತೆ ಕಲ್ಲಿದ್ದಲು ಪೂರೈಕೆಯಾಗಿಲ್ಲ. ಕೇಂದ್ರ ಸಚಿವರಿಗೆ ಪತ್ರ ಬರೆಯಲಾಗಿದೆ. ನಿರಂತರವಾಗಿ ಕೇಂದ್ರ ಕಲ್ಲಿದ್ದಲು ಸಚಿವಾಲಯದೊಂದಿಗೆ ಮುಖ್ಯ ಕಾರ್ಯದರ್ಶಿಗಳು ಸಂಪರ್ಕದಲ್ಲಿದ್ದಾರೆ.

-ಆದಷ್ಟು ಬೇಗನೆ ಕಲ್ಲಿದ್ದಲು ದೊರಕುವ ಭರವಸೆ ದೊರೆತಿದೆ.

-ಕಲ್ಲಿದ್ದಲು ಸಾಗಾಣಿಕೆಯೂ ಸಮರ್ಪಕವಾಗಿ ಆಗುವುದನ್ನು ಖಾತರಿಪಡಿಸಲು ಇಂದು ಮತ್ತೊಮ್ಮೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗುವುದು.

-ಕಲ್ಲಿದ್ದಲು ಪೂರೈಕೆಯನ್ನು ಹಾಗೂ ಕಲ್ಲಿದ್ದಲಿನ ಸಾಗಾಣಿಕೆ ಸಕಾಲದಲ್ಲಿ ಆಗುವುದನ್ನು ಖಾತರಿ ಪಡಿಸಲು ಕಲ್ಲಿದ್ದಲು ಸಚಿವಾಲಯ, ರೈಲ್ವೆ ಕೇಂದ್ರ ಕಚೇರಿಯಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

-ಆದರೆ ಈ ವರೆಗೆ ರಾಜ್ಯದಲ್ಲಿ ಇದರಿಂದಾಗಿ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಲಾಗಿದೆ. ಪರ್ಯಾಯ ಮೂಲಗಳಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಸೌರ ವಿದ್ಯುತ್ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಯಾಗುತ್ತಿರುವುದರಿಂದ ಹಾಗೂ ಜಲ ವಿದ್ಯುತ್ ಮೂಲದಿಂದ ಈ ನಷ್ಟವನ್ನು ಸರಿದೂಗಿಸಲಾಗುತ್ತಿದೆ.

-ಮುಂದಿನ ದಿನಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸುವಂತೆ ಎಲ್ಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

***********************************************