ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಖಾಸಗಿ ಬ್ಯಾಂಕ್ ಗಳಿಂದ ರೈತರ ಶೋಷಣೆ ಸಹಿಸುವುದಿಲ್ಲ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಮಾನ್ಯ ಮುಖ್ಯಮಂತ್ರಿ

ಬೆಂಗಳೂರು, ನವೆಂಬರ್ 05, 2018

-ಖಾಸಗಿ ವಲಯದ ಬ್ಯಾಂಕುಗಳು ರೈತರಿಗೆ ಕೃಷಿ ಸಾಲ ನೀಡುವ ಸಂಬಂಧದಲ್ಲಿ ರೈತರನ್ನು ಶೋಷಣೆಗೊಳಪಡಿಸಿದಲ್ಲಿ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಎಚ್ಚರಿಸಿದ್ದಾರೆ.

-ಬೆಳಗಾವಿ ಜಿಲ್ಲೆಯ ರೈತರಿಗೆ ಆಕ್ಸಿಸ್ ಬ್ಯಾಂಕು ಬಂಧನ ವಾರಂಟ್ ಹೊರಡಿಸಿರುವ ಹಿನ್ನೆಲೆಯಲ್ಲಿ ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದು ಕೃಷಿ ಸಾಲದ ಹೆಸರಿನಲ್ಲಿ ಸಾಲ ನೀಡಿದಲ್ಲಿ ಅಂತಹ ರೈತರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಾಧ್ಯವಾಗದು.

-ಈ ಹಿನ್ನೆಲೆಯಲ್ಲಿ ಆಕ್ಸಿಸ್ ಬ್ಯಾಂಕ್ ಕೃಷಿ ಸಾಲದ ಹೆಸರಿನಲ್ಲಿ ರೈತರಿಗೆ ಶೋಷಣೆ ಮಾಡಿದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

-ಆಕ್ಸಿಸ್ ಬ್ಯಾಂಕ್ ಹಾಗೂ ರೈತರೊಂದಿಗೆ ನಡೆಯಲಿರುವ ಸಭೆಯಲ್ಲಿ ರೈತರ ಹಿತರಕ್ಷಣೆಗೆ ಬದ್ಧವಾಗಿರುವ ಸರ್ವಸಮ್ಮತ ಸೂತ್ರವನ್ನು ಕಂಡುಹಿಡಿಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

-----------------------

ನವೆಂಬರ್ 7 ರಂದು ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳು, ರೈತರ ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಸಭೆ

-ಬೆಳಗಾವಿ ಜಿಲ್ಲೆಯ ರೈತರಿಗೆ ಆಕ್ಸಿಸ್ ಬ್ಯಾಂಕ್ ಕೊಲ್ಕೊತ್ತಾದ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿರುವ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದೂ ಸಹ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

-ಮುಖ್ಯಮಂತ್ರಿಗಳು ರೈತರು ಹಾಗೂ ಆಕ್ಸಿಸ್ ಬ್ಯಾಂಕಿನ ಅಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು ಅದರಂತೆ ಜಿಲ್ಲಾಧಿಕಾರಿಗಳು ನವೆಂಬರ್ 7 ರಂದು ಬ್ಯಾಂಕ್ ಅಧಿಕಾರಿಗಳು ಸಭೆ ನಡೆಸಲಿದ್ದಾರೆ.

-----------------------

ಬೆಳಗಾವಿ ರೈತರ ವಿರುದ್ಧ ಬಂಧನ ವಾರಂಟ್: ರೈತರ ಹಿತ ಕಾಯಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ

-ಆಕ್ಸಿಸ್ ಬ್ಯಾಂಕ್ ಕೊಲ್ಕೊತ್ತಾದ ನ್ಯಾಯಾಲಯದಲ್ಲಿ ಬೆಳಗಾವಿ ಜಿಲ್ಲೆಯ ರೈತರ ಮೇಲೆ ಮೊಕದ್ದಮೆ ದಾಖಲಿಸಿ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ರೈತರ ಹಿತ ಕಾಯುವಂತೆ ನಿರ್ದೇಶಿಸಿದರು.

-ಈ ಪ್ರಕರಣಗಳ ಕುರಿತು ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿದರು.

-ಸಾಲ ಮನ್ನಾ ಯೋಜನೆ ವ್ಯಾಪ್ತಿಗೆ ಬರುವ ರೈತರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಬೆಂಬಲಕ್ಕಿದೆ ಎಂದು ಅವರು ಭರವಸೆ ನೀಡಿದರು.

***********************************************