ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ನೇಕಾರರ ಸಮಸ್ಯೆ ನಿವಾರಿಸಲು ಮುಖ್ಯಮಂತ್ರಿ ನಿರ್ದೇಶನ

ಮಾನ್ಯ ಮುಖ್ಯಮಂತ್ರಿ

ಗೃಹ ಕಚೇರಿ ಕೃಷ್ಣಾ (ಬೆಂಗಳೂರು), ನವೆಂಬರ್ 13, 2018

-ರಾಜ್ಯ ನೇಕಾರರ ಸಮಸ್ಯೆ ಕುರಿತಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಜರುಗಿತು.

-ರಾಜ್ಯದಲ್ಲಿ ನೇಕಾರರ ಪರಿಸ್ಥಿತಿ ದುಸ್ತರವಾಗಿದೆ. ಹಲವಾರು ಕುಟುಂಬಗಳ ಸದಸ್ಯರು ಆತ್ಮಹತ್ಯೆಯಂತಹ ಕ್ರಮಕ್ಕೂ ಮುಂದಾಗಿದ್ದಾರೆ.

-ನೇಕಾರರ ಬವಣೆಗಳನ್ನು ನಿವಾರಿಸಲು ಅಧಿಕಾರಿಗಳೊಂದಿಗೆ ಶೀಘ್ರವೇ ಚರ್ಚಿಸಿ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಸಭೆಯಲ್ಲಿ ಭರವಸೆ ನೀಡಿದರು.

-ಸಭೆಯಲ್ಲಿ ನೇಕಾರರ ಸಂಘದ ಅಧ್ಯಕ್ಷ ಶಿವಲಿಂಗ. ಜಿ. ಟಿರಕಿ, ಸಂಘದ ಪದಾಧಿಕಾರಿಗಳು ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ , ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ರಾಕೇಶ್ ಸಿಂಗ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎನ್.ಎಸ್.ಪ್ರಸಾದ್ ಮತ್ತು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎ.ವಿ.ರಮಣರೆಡ್ಡಿ ಉಪಸ್ಥಿತರಿದ್ದರು.

***********************************************