ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಭತ್ತದ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ಮುಖ್ಯಮಂತ್ರಿ ಸೂಚನೆ

ಮಾನ್ಯ ಮುಖ್ಯಮಂತ್ರಿ

ಗೃಹ ಕಚೇರಿ ಕೃಷ್ಣಾ (ಬೆಂಗಳೂರು), ನವೆಂಬರ್ 13, 2018

-ಭತ್ತದ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ಸಂಕಷ್ಟಕ್ಕೆ ಧಾವಿಸಿರುವ ರಾಜ್ಯ ಸರ್ಕಾರ, ಪ್ರತಿ ಕ್ವಿಂಟಾಲ್ ಭತ್ತಕ್ಕೆ 1600ರೂ ನಂತೆ ಖರೀದಿಸಲು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.

-ಗೃಹ ಕಚೇರಿ ಕೃಷ್ಣದಲ್ಲಿ ಈ ಸಂಬಂಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉನ್ನತ ಅಧಿಕಾರಿಗಳ ಸಭೆ ನಡೆಸಿ, ತಕ್ಷಣವೇ ಮಾರುಕಟ್ಟೆ ಮೂಲಕ ಪ್ರತಿ ಕ್ವಿಂಟಾಲ್ ಭತ್ತಕ್ಕೆ 1600 ರೂ. ನಂತೆ ಖರೀದಿಸಲು ಅಧಿಕಾರಿಗಳಿಗೆ ಆದೇಶ ನೀಡಿದರು.

-ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ನಾಡಗೌಡ ವೆಂಕಟರಾವ್ ಅವರು, ಭತ್ತದ ಬೆಳೆದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರು.

-ಇದಕ್ಕೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿಗಳು ಕೂಡಲೇ ಮಾರುಕಟ್ಟೆಯ ಮೂಲಕ ಒಂದು ಕ್ವಿಂಟಾಲ್ ಗೆ 1600 ರೂ.ನಂತೆ ಖರೀದಿಸಬೇಕೆಂದು ಸೂಚಿಸಿದರು.

***********************************************