ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪರಿಶಿಷ್ಟ ಪಂಗಡಕ್ಕೆ ಗೋಂದಳಿ ಜನಾಂಗ ಸೇರ್ಪಡೆಗೆ ಕೇಂದ್ರಕ್ಕೆ ಪತ್ರ - ಮುಖ್ಯಮಂತ್ರಿ ಭರವಸೆ

know_the_cm

(ಗೃಹ ಕಚೇರಿ ಕೃಷ್ಣಾ, ಬೆಂಗಳೂರು), ಡಿಸೆಂಬರ್ 20, 2019

-ಗೋಂದಳಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಶಿಫಾರಸು ಮಾಡಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.

-ಶಾಸಕ ಎಂ ಎಲ್ ಲಮಾಣಿ ಅವರ ನೇತೃತ್ವದ ನಿಯೋಗ, ಮುಖ್ಯಮಂತ್ರಿಯವರನ್ನು ಭೇಟಿಯಾಗಿ, ಗೋಂದಳಿ ಸಮುದಾಯದ ಜನ ಅಲೆಮಾರಿಗಳಾಗಿದ್ದು, ಶಿಕ್ಷಣ ಮತ್ತು ಉದ್ಯೋಗದಿಂದ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, ಕೇಂದ್ರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.

-ಗೋಂದಳಿ ಸಮುದಾಯಕ್ಕೆ ಯಾವುದೇ ಶಾಸನ ಸಭೆಯಲ್ಲಿ, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯ ಇಲ್ಲ. ಆದ್ದರಿಂದ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವಂತೆಯೂ ನಿಯೋಗದ ಪ್ರತಿನಿಧಿಗಳು ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿ, ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

*************