ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮುಖ್ಯಮಂತ್ರಿಗಳ ಸಭೆಯ ಮುಖ್ಯಾಂಶಗಳು

ಮಾನ್ಯ ಮುಖ್ಯಮಂತ್ರಿ

ಗೃಹ ಕಚೇರಿ ಕೃಷ್ಣಾ (ಬೆಂಗಳೂರು), ನವೆಂಬರ್ 22, 2018

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಯಿತು.

-ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಹಾಗೂ ಇತರ ಅಧಿಕಾರಿಗಳು, ಮಾಜಿ ಸಚಿವರಾದ ಎಸ್.ಆರ್. ಪಾಟೀಲ, ಸತೀಶ್ ಜಾರಕಿಹೊಳಿ, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ ಸೇರದಂತೆ 31 ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆ ಮಾಲೀಕರ ಒಕ್ಕೂಟದ ಅಧ್ಯಕ್ಷ ಉಪಸ್ಥಿತರಿದ್ದರು.

-ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರವಾದ ಮಾಹಿತಿ ನೀಡಿದರು. ದೇಶದಲ್ಲಿ ಪ್ರಸ್ತುತ 230 ಲಕ್ಷ ಟನ್ ಸಕ್ಕರೆ ದಾಸ್ತಾನು ಇದೆ. ಹೆಚ್ಚುವರಿ ಉತ್ಪಾದನೆ ಸಮಸ್ಯೆಯನ್ನು ಸರಿಪಡಿಸಲು ಕೇಂದ್ರ ಸರ್ಕಾರ ಕಬ್ಬಿನಿಂದ ಇಥೆನಾಲ್ ಉತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದೆ. ಇದಲ್ಲದೆ ಎಫ್ಆರ್ ಪಿ ಪಾವತಿ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಗಳು ನಷ್ಟ ಅನುಭವಿಸಿದ ಸಂದರ್ಭದಲ್ಲಿ ನೆರವಾಗಲು ಸಕ್ಕರೆ ಸ್ಥಿರತೆಯ ನಿಧಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ವಿವರಿಸಿದರು.

-ಮುಖ್ಯಮಂತ್ರಿಯವರು ಇಂದು ಸಕ್ಕರೆ ಕಾರ್ಖಾನೆ ಮಾಲೀಕರು ರೈತರೊಂದಿಗೆ ವಿಶ್ವಾಸದ ಮೇಲೆ ಮಾಡಿಕೊಂಡಿರುವ ಒಪ್ಪಂದ. ಆದ್ದರಿಂದ ಈ ಮೊತ್ತ ಪಾವತಿಸುವುದು ನಿಮ್ಮ ಬದ್ಧತೆ. ಕಾರ್ಖಾನೆ ಮಾಲೀಕರು ವ್ಯವಹಾರದಲ್ಲಿ ಆಗುವ ಏರುಪೇರುಗಳನ್ನು ಸರಿಪಡಿಸಿಕೊಳ್ಳುವ ಸಾಮರ್ಥ್ಯವಿರುತ್ತದೆ. ಆದರೆ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಬಾರದಿದ್ದರೆ ಸುಧಾರಿಸಿಕೊಳ್ಳುವುದು ಸಾಧ್ಯವಿಲ್ಲ. ರೈತರ ಹಿತರಕ್ಷಣೆ ಸರ್ಕಾರದ ಕರ್ತವ್ಯವಾಗಿರುವುದರಿಂದ ರೈತರಿಗೆ ಒಪ್ಪಿಗೆ ಸೂಚಿಸಿದಂತೆ ಸೂಕ್ತ ದರ ನೀಡುವಂತೆ ಮುಖ್ಯಮಂತ್ರಿಗಳು ಕಾರ್ಖಾನೆ ಮಾಲೀಕರಿಗೆ ತಿಳಿಸಿದರು.

-2017-18ನೇ ಸಾಲಿನಲ್ಲಿ ಸಕ್ಕರೆ ದರ ಏಕಾಏಕಿ ಕುಸಿದಿದ್ದರಿಂದ ಹಾಗೂ ಇನ್ನಿತರ ವಿವಿಧ ಸಮಸ್ಯೆಗಳ ಕಾರಣದಿಂದ ಈ ಸಮಸ್ಯೆ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ 2900 ರೂಪಾಯಿನಲ್ಲಿ ಸಾರಿಗೆ ಮತ್ತು ಕಟಾವು ವೆಚ್ಚ 650 ರೂಪಾಯಿ ಕಡಿತಗೊಳಿಸಿ, ಪ್ರತಿ ಟನ್ ಗೆ 2250 ರೂಪಾಯಿ ದರದಲ್ಲಿ ರೈತರಿಗೆನೀಡಲು ಒಪ್ಪಿಕೊಂಡಿರುವುದಾಗಿ ಮಾಲೀಕರು ತಿಳಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ಬಹುತೇಕ ಕಾರ್ಖಾನೆಗಳು ಎಫ್ಆರ್ ಪಿ ದರಕ್ಕಿಂತ ಹೆಚ್ಚುವರಿ ಹಣವನ್ನು ನೀಡಿವೆ. ಉಳಿದ 9 ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಮ್ಮತಿಸಿದ ಮೊತ್ತ ನೀಡದಿದ್ದರೂ, ಎಫ್ಆರ್ ಪಿ ದರಕ್ಕಿಂತ ಹೆಚ್ಚಿಗೆ ದರ ಪಾವತಿಸಿರುವುದಾಗಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ರೈತರೊಂದಿಗೆ ಚರ್ಚಿಸಿ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳುವುದಾಗಿ ಮಾಲೀಕರು ತಿಳಿಸಿದರು.

-ರೈತರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ. ಯಾವುದೇ ರೀತಿಯ ಗೊಂದಲಕ್ಕೆ ಎಡೆ ಮಾಡದಂತೆ ರೈತರೊಂದಿಗೆ ಚರ್ಚಿಸಿ, ಸಮಸ್ಯೆಯನ್ನು ಬಗೆಹರಿಸುವಂತೆ ಮಾಲೀಕರಿಗೆ ಸೂಚನೆ ನೀಡಿದರು. ಈಗಾಗಲೇ ಕಟಾವಿಗೆ ಸಿದ್ಧವಿರುವ ಕಬ್ಬನ್ನು ಅರೆಯಲು ರೈತರೊಂದಿಗೆ ಕ್ರಮ ಬದ್ಧ ಒಪ್ಪಂದ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ರೈತರೊಂದಿಗೆ ಸಮನ್ವಯ ಸಾಧಿಸಿ ಕಬ್ಬು ಅರೆಯುವ ಪ್ರಕ್ರಿಯೆ ಮುಂದುವರಿಸಲು ಸೂಚಿಸಿದರು.

-ಪ್ರಸಕ್ತ ಹಂಗಾಮಿನಲ್ಲಿ ಇಂತಹ ಯಾವುದೇ ಗೊಂದಲವಾಗದಂತೆ ಎಚ್ಚರ ವಹಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಸೂಚಿಸಿದರು.. ಎಲ್ಲ ಸಕ್ಕರೆ ಕಾರ್ಖಾನೆ ಮಾಲೀಕರು ಕಡ್ಡಾಯವಾಗಿ ಎಫ್.ಆರ್.ಪಿ. ದರ ಪಾವತಿಸಬೇಕು. ಇದಕ್ಕೆ ಸರ್ಕಾರದ ಮಾರ್ಗಸೂಚಿಗಳಂತೆ ಪ್ರತಿ ರೈತನೊಂದಿಗೆ ಕಡ್ಡಾಯವಾಗಿ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಬೇಕು. ನಂತರ ಕಬ್ಬು ನಿಯಂತ್ರಣ ಮಂಡಳಿಯ ನಿರ್ಣಯಗಳಂತೆ ಆದಾಯ ಹಂಚಿಕೆ ಸೂತ್ರ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.. ಇದಲ್ಲದೆ ರೈತರಿಗೆ ತೂಕ ಹಾಗೂ ಇಳುವರಿ ಪ್ರಮಾಣ ನಿಗದಿಯಲ್ಲಿ ಪಾರದರ್ಶಕತೆ ತರಲು ಸರ್ಕಾರ ಹೊರಡಿಸುವ ಸುತ್ತೋಲೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದರು.

-ರಸ್ತೆ ಬದಿಯಲ್ಲಿ ಸ್ವಚ್ಛತೆಯನ್ನು ಹಾಳು ಮಾಡುವ, ಪರಿಸರಕ್ಕೆ ಹಾನಿಯುಂಟು ಮಾಡುವ ವಸ್ತುಗಳನ್ನು ಮಾರಾಟ ಮಾಡುವವರಿಗೆ ಈ ಯೋಜನೆಯ ಸೌಲಭ್ಯ ದೊರೆಯುವುದಿಲ್ಲ. ಸಾಲ ಸೌಲಭ್ಯ ಪಡೆಯಲು ಬಿಪಿಎಲ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ.

-ಈ ಯೋಜನೆಯಡಿ ಸಹಕಾರಿ ಬ್ಯಾಂಕುಗಳು ತಮ್ಮ ವ್ಯಾಪ್ತಿಯಲ್ಲಿನ ನಗರ ಪ್ರದೇಶಗಳಲ್ಲಿ ನಿಗದಿಪಡಿಸಿದ ಗುರಿಗೆ ತಕ್ಕಂತೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಮೊದಲ ಆದ್ಯತೆ ನೀಡಿ ಸಾಲ ವಿತರಿಸಲು ಕ್ರಮ ತೆಗೆದುಕೊಳ್ಳಲಿದೆ.

-ಸಹಕಾರ ಬ್ಯಾಂಕಿನ ಮೂಲಕ ಮಾತ್ರ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಪ್ರತಿ ನಗರ ಪ್ರದೇಶಕ್ಕೆ ಇದಕ್ಕಾಗಿಯೇ ಪ್ರತ್ಯೇಕವಾಗಿ ಒಂದು ಸಹಕಾರ ಬ್ಯಾಂಕ್ ಮತ್ತು ಮೊಬೈಲ್ ಬ್ಯಾಂಕಿಂಗ್ ಘಟಕಕ್ಕಾಗಿ ಸ್ಥಳ ಗುರುತಿಸುವ ಜವಾಬ್ದಾರಿಯನ್ನು ಡಿಸಿಸಿ ಬ್ಯಾಂಕಿನ ಅಧ್ಯಕ್ಷರ ನೇತೃತ್ವದ ಸಮಿತಿಗೆ ವಹಿಸಲಾಗಿದೆ.

-ಈ ಯೋಜನೆಯಡಿ ಸಹಕಾರಿ ಬ್ಯಾಂಕುಗಳು ತಮ್ಮ ವ್ಯಾಪ್ತಿಯಲ್ಲಿನ ನಗರ ಪ್ರದೇಶಗಳಲ್ಲಿ ನಿಗದಿಪಡಿಸಿದ ಗುರಿಗೆ ತಕ್ಕಂತೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಮೊದಲ ಆದ್ಯತೆ ನೀಡಿ ಸಾಲ ವಿತರಿಸಲು ಕ್ರಮ ತೆಗೆದುಕೊಳ್ಳಲಿದೆ.

-ನೋಂದಾಯಿತ ಬೀದಿ ಬದಿ ವ್ಯಾಪಾರಿಗಳು ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ತಾವು ವ್ಯಾಪಾರ ನಡೆಸುತ್ತಿರುವ ಸ್ಥಳದ ಫೋಟೋ, ಸ್ಥಳೀಯ ಸಂಸ್ಥೆಗಳ ಗುರುತಿನ ಚೀಟಿ ನೀಡಿ, ಶೂನ್ಯ ಬ್ಯಾಂಕ್ ಬ್ಯಾಲೆನ್ಸ್ ಉಳಿತಾಯ ಖಾತೆ ತೆರೆಯಬೇಕಾಗುತ್ತದೆ.

-ಸಾಲದ ಮರು ಪಾವತಿಯ ಅವಧಿ ಮೂರು ತಿಂಗಳಾಗಿದ್ದು, ಅವಧಿಯೊಳಗೆ ಸಾಲ ಮರು ಪಾವತಿ ಮಾಡಿದರೆ ಮತ್ತೆ ಸಾಲ ದೊರೆಯಲಿದೆ. ಜತೆಗೆ ಶೇ ೧೦ ರಷ್ಟು ಹೆಚ್ಚು ಸಾಲ ಒದಗಿಸಿ ಸಾಲದ ಮೊತ್ತವನ್ನು ೧೫ ಸಾವಿರಕ್ಕೆ ಹೆಚ್ಚಿಸಲು ಸಹ ಅವಕಾಶವಿದೆ.

ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಮೇಯರ್ ಗಂಗಾಂಬಿಕೆ ಮತ್ತಿತರರು ಉಪಸ್ಥಿತರಿದ್ದರು.

-------------------

Highlights of Chief Minister’s meeting with Sugar Factory Owners

Chief Minister HD Kumaraswamy convened the meeting with sugar factory owners today.

Deputy Chief Minister Dr. G. Parameshwara, Belagavi district in-charge minister Ramesh Jarakiholi, Bagalkot District in-charge minister Shivanand Patil, Co-operation Minister Bandeppa Kashempoor, Chief Secretary T.M. Vijayabhaskar and other senior officers of the concerned departments, owners of 31 sugar factories including former ministers S.R. Patil, Satish Jarakiholi, Murugesh Nirani, Umesh Katti, Balachandra Jarakiholi and the Chairman of South Indian Federation of Sugar Factory Owners were present at the meeting.

The factory owners put forth their grievances to the Chief Minister.

Chief Minister H.D. Kumaraswamy stated that since sugar factory owners had made a commitment to pay a certain price above the FRP fixed by the Government of India, they would have to abide by it. The farmers would find it difficult to sustain a livelihood if their crops were not sold at a suitable price. The Chief Minister directed the sugar factory owners to pay the agreed-upon price to the farmers, reiterating the Government's commitment to protect the interests of the farmers.

Finally, factory owners of Bagalkot District agreed to pay Rs. 2250 per ton to the farmers, excluding Rs. 650 for harvesting and transport, which amounts to Rs. 2900.

In Belagavi district, most of the factories had paid more than FRP rate. The remaining owners of 9 factories have also paid more than FRP, though they failed to pay the promised amount. Hence, these owners said that they would discuss the matter with farmers and settle it amicably among themselves.

The Chief Minister said that it is the duty of the Government to protect the interests of farmers. Hence, sugar factory owners must resolve the issue by discussing with the farmers. He also directed the owners to have a legal pact with the farmers on crushing sugarcane this season.

To ensure that no confusion is created in future, he directed the factory owners to pay the FRP price to farmers and have a mutual agreement contract, according to the guidelines issued by the Government, with each farmer. He clearly specified that later the factory owners must abide by the revenue-sharing formula decided by the Cane Control Board and follow all the directions of the Government to bring in transparency in weighing and fixing the recovery rate to farmers.

***********************************************