ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮೇಲುಕೋಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಲು ಮುಖ್ಯಮಂತ್ರಿ ಸೂಚನೆ

ಮಾನ್ಯ ಮುಖ್ಯಮಂತ್ರಿ

ಮೇಲುಕೋಟೆ (ಮಂಡ್ಯ), ನವೆಂಬರ್ 23, 2018

-ಪ್ರಮುಖ ಧಾರ್ಮಿಕ ಕೇಂದ್ರ ಮೇಲುಕೋಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ನೀಲನಕ್ಷೆ ತಯಾರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸೂಚನೆ ನೀಡಿದ್ದಾರೆ.

-ಮೇಲುಕೋಟೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮೇಲುಕೋಟೆಯಲ್ಲಿ ಸಚಿವರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

-ಮೇಲುಕೋಟೆಯ ಅಭಿವೃದ್ಧಿಯಿಂದ ಯುವಜನರಿಗೆ ಹೆಚ್ಚಿನ ಉದ್ಯೋಗ ಸೃಷ್ಠಿಯಾಗಲಿದೆ. ಜೊತೆಗೆ ಮೇಲುಕೋಟೆಗೆ ಆರ್ಥಿಕ ಸಂಪನ್ಮೂಲ ಹೆಚ್ಚಿನ ಪ್ರಮಾಣದಲ್ಲಿ ಬರಲಿದೆ. ಆದ್ದರಿಂದ, ಈ ಬಗ್ಗೆ ಗಮನಹರಿಸುವಂತೆ ಸೂಚನೆ ನೀಡಿದರು.

-ಮೇಲುಕೋಟೆ ವ್ಯಾಪ್ತಿಯಲ್ಲಿ 15 ರಾಜ್ಯ ಸಂರಕ್ಷಿತ ಸ್ಮಾರಕ, ಒಂದು ಕೇಂದ್ರ ಸಂರಕ್ಷಿತ ಸ್ಮಾರಕ, 105 ಆರಕ್ಷತಾ ಮಂಟಪ ಮತ್ತು ಕೊಳವೆ ಇದ್ದು, ಇವುಗಳ ಅಭಿವೃದ್ಧಿಗೆ ಕ್ರಮ ವಹಿಸಬೇಕು. ಅಂತೆಯೇ, ಘನ ಮತ್ತು ದ್ರವ ತ್ಯಾಜ್ಯಗಳನ್ನು ಸೂಕ್ತ ವಿಲೇವಾರಿ ಮಾಡಲು ಯೋಜನೆ ರೂಪಿಸಬೇಕು. ಈ ನಿಟ್ಟಿನಲ್ಲಿ ಇತರೆ ಇಲಾಖೆಗಳು ಪ್ರವಾಸೋಧ್ಯಮ ಇಲಾಖೆಯೊಂದಿಗೆ ಸಹಕಾರ ನೀಡಬೇಕು.

-ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಯೋಜನೆ ರೂಪಿಸಬೇಕು. ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಅಂಗಡಿ ಮಳಿಗೆ ನಿರ್ಮಾಣ ಮಾಡುವ ಸಂಬಂಧ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

-ಸಭೆಯಲ್ಲಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಾ.ರಾ.ಮಹೇಶ್, ಶಾಸಕರುಗಳಾದ ಶ್ರೀನಿವಾಸ್, ನಾರಾಯಣ ಸ್ವಾಮಿ, ಸುರೇಶ್ ಗೌಡ, ಶ್ರೀಕಂಠೇಗೌಡ, ಅಪ್ಪಾಜಿ ಗೌಡ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.

***********************************************