ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕನಗನಮರಡಿ ಬಸ್ ಅಪಘಾತ: ಮುಖ್ಯಮಂತ್ರಿ ದಿಗ್ಭ್ರಮೆ, ರಕ್ಷಣಾ ಕಾರ್ಯಾಚರಣೆಗೆ ಸೂಚನೆ

ಮಾನ್ಯ ಮುಖ್ಯಮಂತ್ರಿ

ಪಾಂಡವಪುರ (ಮಂಡ್ಯ), ನವೆಂಬರ್ 24, 2018

-ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕು ಕನಗನಮರಡಿ ಬಳಿ ವಿ.ಸಿ. ನಾಲೆಗೆ ಬಸ್ ಬಿದ್ದು 15 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ದಿಗ್ಭ್ರಮೆ ವ್ಯಕ್ತ ಪಡಿಸಿದ್ದಾರೆ.

-ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಸ್ಥಳಕ್ಕೆ ಕೂಡಲೇ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುವ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ.

-ಮುಖ್ಯಮಂತ್ರಿಗಳು ತಮ್ಮ ಇಂದಿನ ಎಲ್ಲ ಕಾರ್ಯಕ್ರಮಗಳನ್ನೂ ರದ್ದು ಪಡಿಸಿ ಪಾಂಡವಪುರ ತಾಲ್ಲೂಕು ಕನಗನಮರಡಿ ಗ್ರಾಮದ ಬಸ್ ಅಪಘಾತ ನಡೆದ ಸ್ಥಳಕ್ಕೆ ಧಾವಿಸಲಿದ್ದಾರೆ.

-ಇಂದು ಸಂಜೆ ನಡೆಯ ಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ.

***********************************************