ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರೈತರ ಮನೆ ಬಾಗಿಲಿಗೆ ಸರ್ಕಾರ - ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಮಾನ್ಯ ಮುಖ್ಯಮಂತ್ರಿ

ವಿಧಾನಸೌಧ(ಬೆಂಗಳೂರು), ನವೆಂಬರ್ 29, 2018

-ಕರ್ನಾಟಕ ರಾಜ್ಯ ರೈತರ ಸಲಹಾ ಸಮಿತಿಯ ಪ್ರಥಮ ಸಭೆಯು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

-ಸರ್ಕಾರ ಮತ್ತು ರೈತರ ನಡುವೆ ಕಂದಕವಿರಬಾರದು . ರೈತರ ಮನೆಬಾಗಿಲಿಗೆ ಸರ್ಕಾರ ಬರುತ್ತಿದೆ. ಕೃಷಿಕರು ನೆಮ್ಮದಿಯಾಗಿ ಬದುಕಬೇಕೆಂಬ ಕನಸು ಸರ್ಕಾರದ್ದು. ಗ್ರಾಮಗಳು ಬದುಕಿ, ರೈತರ ಸಂಕಷ್ಟಗಳು ದೂರವಾಗಿಸುವ ನಿಟ್ಟಿನಲ್ಲಿ ಮೈತ್ರಿ ಸರ್ಕಾರ ಕಾರ್ಯೋನ್ಮುಖವಾಗಿದೆ.

-ಪ್ರತಿ ಜಿಲ್ಲೆಯಿಂದ ಇಬ್ಬರು ಪ್ರಗತಿಪರ ರೈತರನ್ನು ಒಳಗೊಂಡ ಒಟ್ಟು ೬೦ ರೈತ ಪ್ರತಿನಿಧಿಗಳ ಸಲಹಾ ಸಮಿತಿಯನ್ನು ರಚಿಸಿದೆ. ಆಯವ್ಯಯದಲ್ಲಿ ಘೋಷಿಸಿದ್ದ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಮತ್ತು ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

-ರೈತರು ಇಂದು ನೀಡಿರುವ ಸಲಹೆಗಳನ್ನು ಆಧರಿಸಿ ತಕ್ಷಣದಿಂದ ಸರ್ಕಾರ ಕಾರ್ಯೋನ್ಮುಖವಾಗಿ, ಹಂತಹಂತವಾಗಿ ಜಾರಿಗೆ ತರಲಾಗುವುದು ಹಾಗೂ ಪ್ರತಿ ೨ ತಿಂಗಳಿಗೊಮ್ಮೆ ರೈತರ ಸಲಹಾ ಸಮಿತಿ ಸಭೆಯನ್ನು ಏರ್ಪಡಿಸಿ , ಅವರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದರು

* ರೈತರ ಬೆಳೆಗೆ ಉತ್ತಮ ಬೆಲೆ, ರೈತರರಿಗೆ ಹೊಸ ಕೃಷಿ ಪದ್ಧತಿಗಳ ಬಗ್ಗೆ ತಿಳುವಳಿಕೆ, ವೈಜ್ಞಾನಿಕವಾಗಿ ಬೆಳೆ ಬೆಳೆಯುವ ಪದ್ಧತಿಯ ಅಳವಡಿಕೆ.

* ವಿದೇಶಗಳಿಗೆ ತಮ್ಮ ಉತ್ಪಾದನೆಯನ್ನು ರಫ್ತು ಮಾಡುವ ದಿಸೆಯಲ್ಲಿ ಗುಣಮಟ್ಟದ ಹೆಚ್ಚಳ.

* ಸಾಮೂಹಿಕ ಕೃಷಿ ಪದ್ಧತಿ, ಕೃಷಿ ಉಪ ಕಸುಬುಗಳ ಬೆಳವಣಿಗೆ.

* ಮಾರುಕಟ್ಟೆ ವ್ಯವಸ್ಥೆ , ಉಗ್ರಾಣ ಹಾಗೂ ಶೈತ್ಯಾಗಾರದ ನಿರ್ಮಾಣ , ಉತ್ತಮ ಬಿತ್ತನೆ ಬೀಜಗಳ ಪೂರೈಕೆ.

* ನೀರಿನ ಸಂರಕ್ಷಣೆ ಹಾಗೂ ಸದ್ಬಳಕೆ ಸೇರಿದಂತೆ ಮುಂತಾದ ವಿಷಯಗಳ ಬಗ್ಗೆ ರೈತರೊಂದಿಗೆ ಸುದೀರ್ಘವಾಗಿ ಸಭೆಯಲ್ಲಿ ಚರ್ಚಿಸಲಾಯಿತು.

-ಕೃಷಿ ಸಚಿವ ಶಿವಶಂಕರ್ ರೆಡ್ಡಿ, ತೋಟಗಾರಿಕೆ ಸಚಿವ ವಿ.ಮನಗೊಳಿ, , ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಪಶುಸಂಗೋಪನೆ ಸಚಿವ ನಾಡಗೌಡ,ಅರಣ್ಯ ಸಚಿವ ವಿ.ಶಂಕರ್, ಪ್ರವಾಸೋದ್ಯಮ ಸಚಿವ ಸಾ.ರ.ಮಹೇಶ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು, ರಾಜ್ಯದ ಎಲ್ಲ ಜಿಲ್ಲೆಗಳ ರೈತರು ಸಭೆಯಲ್ಲಿ ಭಾಗವಹಿಸಿದ್ದರು.

***********************************************