ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು

ಶಿವಮೊಗ್ಗ-ಶಿಕಾರಿಪುರ-ರಾಣಿಬೆನ್ನೂರು ರೈಲು ಮಾರ್ಗಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

know_the_cm

ವಿಧಾನಸೌಧ (ಬೆಂಗಳೂರು), ಆಗಸ್ಟ್ 14, 2019

1. ಶಿವಮೊಗ್ಗ-ಶಿಕಾರಿಪುರ-ರಾಣಿಬೆನ್ನೂರು ರೈಲು ಮಾರ್ಗವನ್ನು 956 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

2. ಶಿವಮೊಗ್ಗ ಕಿರು ವಿಮಾನ ಇಳಿದಾಣವನ್ನು ರಾಜ್ಯ ಸರ್ಕಾರದ ಕೆ.ಎಸ್.ಐ.ಐ.ಡಿ.ಸಿ ಸಂಸ್ಥೆಯ ಮೂಲಕ 38 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಯಿತು.

3. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ 66 ಸಣ್ಣ ನೀರಾವರಿ/ ಜಿಲ್ಲಾ ಪಂಚಾಯತ್ ಕೆರೆಗಳನ್ನು ಮೂಡಿ ಗ್ರಾಮದ ಹತ್ತಿರ ವರದಾ ನದಿಯಿಂದ ನೀರನ್ನೆತ್ತಿ ತುಂಬಿಸುವ 285 ಕೋಟಿ ರೂ.ಗಳ ಮೂಡಿ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

4. ಮೆ: ಸತಾರೆಂ ಎಂಟರ್ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಶದಲ್ಲಿರುವ ಕನ್ನಹಳ್ಳಿಯಲ್ಲಿರುವ ಘನತ್ಯಾಜ್ಯ ಘಟಕದಲ್ಲಿನ 20 ಎಕರೆ ಜಾಗವನ್ನು 30 ವರ್ಷಗಳ ಅವಧಿಗೆ ‘ಉಪಯೋಗಕ್ಕೆ ಮಾತ್ರ’ ಆಧಾರದ ಮೇಲೆ ನೀಡಲು ನಿರ್ಧರಿಸಲಾಯಿತು.

5. ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು 3800 ಕೋಟಿ ರೂ. ಹೆಚ್ಚುವರಿ ಅನುದಾನ ಸೇರಿ 10000 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧಾರದ ಕೈಗೊಳ್ಳಲಾಯಿತು.

*************