ಬೆಂಗಳೂರು, ಅಕ್ಟೋಬರ್ 30, 2019
-ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
-ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ, ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿ, ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ಅವರು ಸೇವೆ ಸಲ್ಲಿಸಿದ್ದರು.
-2001 ರಲ್ಲಿ ಕರ್ನಾಟಕ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಅವರು ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಿ, ಈ ವ್ಯವಸ್ಥೆಯ ಕುರಿತು ಜನರಲ್ಲಿ ನಂಬಿಕೆ ಮೂಡಿಸಿದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
-ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
---------------------
Bengaluru, October 30, 2019
-Chief Minister B.S. Yediyurappa has condoled the death of former Lokayukta, Justice N. Venkatachala.
-In his message he remembered, He served as Judge and acting Chief Justice of High court of Karnataka and later on served as Judge, Supreme Court of India.
-But he became household name in Karnataka after he assumed office as Lokayukta.
-His contribution to strengthen and instill faith about Lokayukta institution among people is outstanding.
-People will remember him for his fight against corruption.
-May his soul rest in peace and May God give strength to his family and well wishers to bear this loss, Chief Minister said.
******************