ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

know_the_cm

ಬೆಂಗಳೂರು, ನವೆಂಬರ್ 02, 2019

-ಮಾಜಿ ಸಚಿವ, ಕಲ್ಯಾಣ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಜೀವನವನ್ನೇ ಮುಡಿಪಾಗಿಟ್ಟ ವೈಜನಾಥ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ವಿಧಿಯ ಮುಖಾಂತರ ವಿಶೇಷ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು.

-ಈ ಭಾಗದ ಅಭಿವೃದ್ಧಿಯ ಕುರಿತ ಅವರು ತೋರಿದ ಕಾಳಜಿ ಅನನ್ಯವಾದುದು. ಶಾಸಕರಾಗಿ ಹಾಗೂ ತೋಟಗಾರಿಕೆ, ನಗರಾಭಿವೃದ್ಧಿ ಸಚಿವರಾಗಿ ಅವರ ಕೊಡುಗೆಯೂ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

-ಅವರ ನಿಧನದಿಂದ ಒಬ್ಬ ನೇರ ನಡೆ, ನುಡಿಯ ಹೋರಾಟಗಾರ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದಿರುವ ಮುಖ್ಯಮಂತ್ರಿಗಳು, ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

---------------------

ಮುಖ್ಯಮಂತ್ರಿ ಅವರು ನಗರದ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಸಚಿವ ವೈಜನಾಥ ಪಾಟೀಲ್ ಅವರ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು.

know_the_cm

know_the_cm

******************