ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಭಾರತ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

know_the_cm

ಬೆಂಗಳೂರು, ನವೆಂಬರ್ 11, 2019

-ಭಾರತ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಶೇಷನ್ ಅವರು, ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಗೆ ಹೊಸ ಆಯಾಮ ನೀಡಿದ ದಿಟ್ಟ ವ್ಯಕ್ತಿ, ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ ಎಂದು ಅವರು ತಿಳಿಸಿದ್ದಾರೆ.

-ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧುವರ್ಗಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

******************