ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಹೂಡಿಕೆ ಆಕರ್ಷಿಸುವ ರಾಜ್ಯದ ಪ್ರಯತ್ನಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ಮೆಚ್ಚುಗೆ

know_the_cm

(ದಾವೊಸ್, ಸ್ವಿಟ್ಜರ್ಲ್ಯಾಂಡ್), ಜನವರಿ 22, 2020

-ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಬೆಳಗಿನ ಉಪಾಹಾರದೊಂದಿಗೆ ಉಭಯ ರಾಜ್ಯಗಳ ಆರ್ಥಿಕ ಸ್ಥಿತಿ ಗತಿಗಳ ಕುರಿತು ಚರ್ಚೆ ನಡೆಸಿದರು.

-ಈ ಸಂದರ್ಭದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ರಾಜ್ಯದಲ್ಲಿರುವ ಕೈಗಾರಿಕೆಗಳಿಗೆ ಉತ್ತೇಜನಕಾರಿ ವಾತಾವರಣ ಹಾಗೂ ರಾಜ್ಯಕ್ಕೆ ಬಂಡವಾಳ ತರಲು ಕರ್ನಾಟಕ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

-“ಪ್ರತಿಯೊಬ್ಬ ಹೂಡಿಕೆದಾರನೂ ಬೆಂಗಳೂರು ಕುರಿತು ಹಾಗೂ ಪೂರ್ವ ರಾಷ್ಟ್ರಗಳಲ್ಲಿ ಬೆಂಗಳೂರು ಜ್ಞಾನಾಧಾರಿತ ಕೇಂದ್ರವಾಗಿ ಬೆಳೆದಿರುವ ಕುರಿತು ಉಲ್ಲೇಖಿಸುತ್ತಾರೆ. ಈ ವಿಷಯದಲ್ಲಿ ನಿಮ್ಮನ್ನು ಮೀರಿಸಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿಯವರನ್ನು ಅಭಿನಂದಿಸಿದರು.

-ಮುಖ್ಯಮಂತ್ರಿಯವರು, ಕಮಲ್ ನಾಥ್ ಅವರಿಗೆ ರಾಜ್ಯ ಸರ್ಕಾರವು ಕೃಷಿ ವಲಯದಲ್ಲಿ ಕೈಗೊಂಡಿರುವ ನೂತನ ಉಪಕ್ರಮಗಳ ಕುರಿತು ಮಾಹಿತಿ ನೀಡುತ್ತಾ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಭಾರತ ಸರ್ಕಾರ ನೀಡುವ 6,000/- ರೂ. ಗಳ ಜೊತೆಗೆ ಹೆಚ್ಚುವರಿಯಾಗಿ 4,000/- ರೂ. ಗಳನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಇದರಿಂದ 40 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಿದೆ ಎಂದು ವಿವರಿಸಿದರು.

-ಕಮಲ್ ನಾಥ್ ಅವರು, ಬೆಂಗಳೂರನ್ನು ಕೃತಕ ಬುದ್ಧಿಮತ್ತೆ ಮತ್ತು ಆತಿಥ್ಯ ವಲಯಗಳ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಕುರಿತು ಅರಿತುಕೊಳ್ಳಲು ಆಸಕ್ತಿ ವಹಿಸಿದರು. ಅವರು ಕರ್ನಾಟಕ ಪೆವಿಲಿಯನ್ ಕುರಿತು ಹಾಗೂ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಹೂಡಿಕೆ ಆಕರ್ಷಿಸುವ ಕುರಿತು ಅಧಿಕಾರಿಗಳ ನಡೆಯನ್ನು ಶ್ಲಾಘಿಸಿದರು.

---------------

know_the_cm

(Davos, Switzerland), January 22, 2020

Madhya Pradesh CM appreciates GOK's efforts to bring in investments

-Chief minister Shri B S Yediyurappa had breakfast meeting with his Madhya Pradesh Counterpart Kamalnath and discussed the economic conditions of their respective states.

-Madhya Pradesh chief minister Kamalnath was very much appreciative of the Karnataka government’s efforts to bring in investments and the existing industrial atmosphere in the state.

-“We are unable to beat you on this score as every investor speaks about Bengaluru and its emergence as the knowledge hub in the east” he said complimenting the chief minister for making things to happen in Bengaluru.

-Chief minister briefed Kamalnath on the measures initiated by BJP government on the farming front and said his government is giving rupee 4,000 in addition to Prime Minister Kisan Samman Nidhi ,which gives Rs 6,000 to each farmer. More than forty lakh farmers are benefited by the scheme.

-Kamalnath was very particular to know about Karnataka’s take on developing Bengaluru as a centre of artificial intelligence and hospitality sectors.

-Kamalnath also appreciated Karnataka pavilion here at Davos and officers who are involved in the exercise at WEF to make investments a reality.

*************