ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪ್ರತಿಷ್ಠಿತ ಹೂಡಿಕೆದಾರರು, ಉದ್ಯಮಿಗಳಿಂದ ಕರ್ನಾಟಕದಲ್ಲಿ ಹೂಡಿಕೆಗೆ ಉತ್ಸಾಹದ ಪ್ರತಿಕ್ರಿಯ

know_the_cm

(ದಾವೊಸ್, ಸ್ವಿಟ್ಜರ್ಲ್ಯಾಂಡ್), ಜನವರಿ 22, 2020

-ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೂರನೇ ದಿನ ಕರ್ನಾಟಕದ ಪಾಲಿಗೆ ಫಲಪ್ರದವಾಗಿ ಪರಿಣಮಿಸಿತು. ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಪ್ರತಿಷ್ಠಿತ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು. ಇದರಲ್ಲಿ ದಸ್ಸಾ ಸಿಸ್ಟಮ್ಸ್, ಅರ್ಸೆಲಾರ್ ಮಿತ್ತಲ್, ಭಾರತ್ ಫೋರ್ಜ್, ಲಾಕ್ ಹೀಡ್ ಮಾರ್ಟಿನ್, ಲುಲು ಗ್ರೂಪ್ ಮತ್ತು ನೊವೊ ನಾರ್ಡಿಸ್ಕ್ ಮೊದಲಾದ ಕಂಪೆನಿಗಳು ಸೇರಿದ್ದವು.

-ತಮ್ಮನ್ನು ಭೇಟಿಯಾದ ಹೂಡಿಕೆದಾರರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರವು ಹೂಡಿಕೆದಾರರಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಿದೆ ಹಾಗೂ ಎಲ್ಲ ರೀತಿಯ ಅಡಚಣೆಗಳನ್ನೂ ನಿವಾರಿಸಲಿದೆ ಎಂದು ಸ್ಪಷ್ಟಪಡಿಸಿದರು. “ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿ ಹೂಡಿಕೆಗೆ ಸೂಕ್ತ ನೆರವು ಒದಗಿಸಲಿದ್ದಾರೆ” ಎಂದು ತಿಳಿಸಿದರು.

-ಈಗಾಗಲೇ ಬೆಂಗಳೂರಿನಲ್ಲಿ ಅಸ್ತಿತ್ವ ಹೊಂದಿರುವ ದಸ್ಸಾ ಸಿಸ್ಟಮ್ಸ್ 3ಡಿಎಸ್ ಅವರಿಂದ ಹೂಡಿಕೆಯ ಕುರಿತು ಅತ್ಯಂತ ಭರವಸೆಯ ಪ್ರತಿಕ್ರಿಯೆ ವ್ಯಕ್ತವಾಯಿತು.

know_the_cm

-ಕಂಪೆನಿಯ ಉಪಾಧ್ಯಕ್ಷ ಫ್ಲಾರೆನ್ಸ್ ವರ್ಝೆಲೆನ್ ಅವರು ಬೆಂಗಳೂರು ಹಾಗೂ ಯಾವುದಾದರೂ ಜಿಲ್ಲೆಯಲ್ಲಿ ಎರಡು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ವಹಿಸುವುದಾಗಿ ತಿಳಿಸಿದರು. “ನಾವು ಪ್ರತಿ ಕೇಂದ್ರದಲ್ಲಿ ಪ್ರತಿ ವರ್ಷ ತಲಾ 2000 ಯುವಕರಿಗೆ ತರಬೇತಿ ನೀಡಿ, ದೊಡ್ಡ ಕಂಪೆನಿಗಳಲ್ಲಿ ಕೌಶಲ್ಯಪೂರ್ಣ ಉದ್ಯೋಗ ಪಡೆಯಲು ಅರ್ಹರನ್ನಾಗಿಸಲಿದ್ದೇವೆ” ಎಂದು ಅವರು ನುಡಿದರು. ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಯುವಕರಿಗೆ ತರಬೇತಿ ನೀಡಲು ತಾವು ಆಸಕ್ತರಾಗಿರುವುದಾಗಿ ಅವರು ತಿಳಿಸಿದರು.

-ಎಂಜಿನಿಯರಿಂಗ್ ಪದವೀಧರರಿಗೂ ತರಬೇತಿ ನೀಡಲಾಗುವುದು ಎಂದು ತಿಳಿಸಿದ ಅವರು, ಈ ಕೇಂದ್ರಗಳ ಸ್ಥಾಪನೆಗೆ ಒಂದು ದಶಲಕ್ಷ ಯುರೋ ಹೂಡಿಕೆ ಮಾಡಲಾಗುವುದು ಎಂದು ತಿಳಿಸಿದರು. ಬೆಂಗಳೂರು ರಕ್ಷಣಾ ಉಪಕರಣಗಳು ಹಾಗೂ ಎರೋಸ್ಪೇಸ್ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಈ ವಲಯಗಳಲ್ಲಿ ತರಬೇತಿ ಹೊಂದಿದ ಯುವಕರಿಗೆ ಬೇಡಿಕೆ ಇರುವ ಕುರಿತು ಮುಖ್ಯಮಂತ್ರಿಯವರು ಗಮನ ಸೆಳೆದಾಗ ವರ್ಝೇಲೆನ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಮುಂದಿನ ದಿನಗಳಲ್ಲಿ ಅಂತಹ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

-ಉಕ್ಕಿನ ಕೈಗಾರಿಕೆಗಳ ಪ್ರಮುಖ ಉದ್ಯಮಿ ಲಕ್ಷ್ಮಿ ಎನ್ ಮಿತ್ತಲ್ ನಿನ್ನೆ ರಾತ್ರಿ ನಡೆದ ಸಿಐಐ ಭೋಜನ ಕೂಟದ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾದರು. ಇಂದು ಬೆಳಿಗ್ಗೆಯೂ ಕರ್ನಾಟಕ ಪೆವಿಲಿಯನ್ ಗೆ ಆಗಮಿಸಿ, ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಚರ್ಚೆ ನಡೆಸಿದರು. ಅವರ ಕಂಪೆನಿಯು ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 3000 ಎಕರೆ ಭೂಮಿ ಹೊಂದಿದೆ. “2010ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ಉಕ್ಕು ತಯಾರಿಕಾ ಘಟಕ ಸ್ಥಾಪನೆಗೆ ಅನುಮತಿ ನೀಡಿದ್ದು, ಕಾರಣಾಂತರಗಳಿಂದ ಇದಕ್ಕೆ ಅಡಚಣೆಗಳು ಉಂಟಾಗಿವೆ. ಈಗ ತಾವು ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿ'' ಎಂದು ಮನವಿ ಮಾಡಿದರು ಹಾಗೂ ಕರ್ನಾಟಕದಲ್ಲಿ ಸೌರ ವಿದ್ಯುತ್ ಸ್ಥಾವರದಲ್ಲಿ ಹೂಡಿಕೆ ಮಾಡುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಉಕ್ಕು ತಯಾರಿಕಾ ಘಟಕ ಹಾಗೂ ಸೌರ ವಿದ್ಯುತ್ ಸ್ಥಾವರಗಳೆರಡರ ಯೋಜನೆಯನ್ನೂ ಕೂಡಲೇ ಪ್ರಾರಂಭಿಸುವಂತೆ ಸಲಹೆ ನೀಡಿದರು. ಅದಕ್ಕೆ ಮಿತ್ತಲ್ ಅವರು ಈ ಕೂಡಲೇ ಉಕ್ಕಿನ ಉಪಯೋಗದ ಕುರಿತ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸುವುದಾಗಿ ತಿಳಿಸಿದರು.

-ಲುಲು ಗ್ರೂಪ್ ಅಧ್ಯಕ್ಷ ಯೂಸುಫ್ ಅಲಿ ಅವರು ಕರ್ನಾಟಕದಲ್ಲಿ ಸರಕು ಸಾಗಾಣಿಕೆ ವಲಯದಲ್ಲಿ 2000 ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದರು. ಈ ಸಂಸ್ಥೆಯು ವಿಶೇಷವಾಗಿ ಕೃಷಿ ಉತ್ಪನ್ನ ಹಾಗೂ ಶೀಘ್ರ ಕೊಳೆತು ಹೋಗುವ ತರಕಾರಿ, ಆಹಾರ ವಸ್ತುಗಳು, ಹಣ್ಣು ಹಂಪಲು ಹಾಗೂ ಪುಷ್ಪಗಳ ಸಾಗಾಣಿಕೆಗೆ ಹೂಡಿಕೆ ಮಾಡಲಿದೆ.

-ಕೈಗಾರಿಕಾ ಸಚಿವ ಜಗದೀಶ್ ಎಸ್ ಶೆಟ್ಟರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ಅವರೂ ಸಹ ಈ ಸಭೆಗಳಲ್ಲಿ ಭಾಗವಹಿಸಿದರು.

----------------------------------------------------------

know_the_cm

(Davos, Switzerland), January 22, 2020

Fruitful Day for Karnataka at WEF: Concrete Assurances from Big Investors

-Third day of the WEF meet turned to be very fruitful for Karnataka chief minister B S Yedyiyurappa with he persuading many of the big investors and industrialists to invest in Karnataka and they included Dassault Systems, Arcelor Mittal, Baharat Forge, Loockheed Martin, Lulu group and Novo Nordisk.

-Chief Minister made it clear to all these investors that the Karnataka government is ready to resolve all their issues and clear all their hurdles to make the investments a reality. “I am serious on this score and my officers will work over time to facilitate your investments“ he categorically told the investors who met him on Wednesday here at the Karnataka pavilion.

-Most concrete assurance on investments came from Dassault systems 3DS which has already its presence in Bengaluru.

know_the_cm

-Vice-president of the group Florence Verzelen said soon she initiate measures to set up two 'centres of excellence', one at around Bengaluru and another in moffusil district. “We will train nearly 2000 youth in each centre every year who will be ready to take up the skilled jobs in big companies'' she said, adding that, they are interested to train youths in smart city projects.

She said ''We will also train the engineering graduates and our investment is around a million Euros on these centres''. When the chief minister pointed out to her the growing demand for youths trained in aerospace and defense production techniques with Bengaluru becoming a hub of defense accessories, she responded positively. ''We will plan such centres of excellence in coming days“ she added.

-Steel magnate Laxmi. N Mittal who attended the dinner hosted by CII last night which chief minister Yediyurappa attended and met the chief minister today at Karnataka pavilion and discussed about the Company’s interest to invest in Karnataka where he already has 3000 acres of land at his disposal In Bellary district. Pointing out the permission given by previous BJP government headed by Yediyurappa in 2010 to start a steel plant, he said the project has run into troubled water for various reasons. “You now get cleared the hurdles and I will plan to invest in Karnataka in Solar power plant, he said. However chief minister pointed out to him to start work on solar and steel plants simultaneously. However he replied that he will immediately take steps to start a R & D centre at Bengaluru which will carry out research on steel usages.

-Optimistic promise came from Lulu group Chairman Yusuf Ali who said soon he initiate measures to invest 2000 crore in Karnataka in Logistics field.

-Industries minister Jagdish Shettar and chief secretary T M Vijaybhasker also participated in the meetings.

*************