ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ವರ್ಲ್ಡ್ ಎಕನಾಮಿಕ್ ಫೋರಂ ಗೋಷ್ಠಿಯಲ್ಲಿ ಭಾಗಿಯಾದ ಮುಖ್ಯಮಂತ್ರಿ

know_the_cm

(ದಾವೊಸ್, ಸ್ವಿಟ್ಜರ್ಲ್ಯಾಂಡ್), ಜನವರಿ 23, 2020

-ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಕೇಂದ್ರ ಕೈಗಾರಿಕಾ ಸಚಿವ ಪಿಯುಷ್ ಗೋಯಲ್ ಅವರು ವಿಷಯ ಮಂಡನೆ ಮಾಡಿದ, “Strategic outlook: India” ಎಂಬ ಗೋಷ್ಠಿಯಲ್ಲಿ ಭಾಗವಹಿಸಿ ಗಮನ ಸೆಳೆದರು.

-ಸಂವಾದ ಕಾರ್ಯಕ್ರಮದ ಅಂತ್ಯದಲ್ಲಿ ದೇಶದ ಬೆಳವಣಿಗೆಯಲ್ಲಿ ರಾಜ್ಯಗಳ ಪಾತ್ರದ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ಎಲ್ಲ ಆರ್ಥಿಕ ಚಟುವಟಿಕೆಗಳೂ ರಾಜ್ಯಗಳಲ್ಲಿ ನಡೆಯುವುದರಿಂದ, ದೇಶದ ಆರ್ಥಿಕತೆಯ ಬೆಳವಣಿಗೆಗೆ ರಾಜ್ಯಗಳ ಬೆಳವಣಿಗೆ ಅತಿ ಮುಖ್ಯ. ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಆರ್ಥಿಕತೆಯ ಕನಸನ್ನು ಸಾಕಾರಗೊಳಿಸಲು ರಾಜ್ಯಗಳು ತಮ್ಮ ಆರ್ಥಿಕ ಚಟುವಟಿಕೆಗಳನ್ನು ಇನ್ನಷ್ಟು ತೀವ್ರಗೊಳಿಸಬೇಕು ಎಂದರು.

-"ನನ್ನ ರಾಜ್ಯ ಕರ್ನಾಟಕ 250 ಬಿಲಿಯನ್ ಡಾಲರ್ ಜಿಡಿಪಿಯನ್ನು ಹೊಂದಿದ್ದು, ಶೇ. 9ರ ಬೆಳವಣಿಗೆ ದರ ಹೊಂದಿದೆ. ಈ ಸಮಾವೇಶದಲ್ಲಿ ನಾವು ಹೂಡಿಕೆದಾರರು ಮತ್ತು ಉದ್ಯಮಿಗಳನ್ನು ಭಾರತದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದ್ದೇವೆ. ಇದಕ್ಕೆ ಉತ್ತಮ ಸ್ಪಂದನೆ ದೊರೆಯುವ ವಿಶ್ವಾಸವಿದೆ" ಎಂದು ತಿಳಿಸಿದರು.

-ಹೂಡಿಕೆದಾರರೂ ಸಹ ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಆರ್ಥಿಕತೆಯ ಆಶಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಅಭಿಪ್ರಾಯಪಟ್ಟ ಅವರು, ಸಂವಾದದ ಕುರಿತು ಅಭಿಪ್ರಾಯ ತಿಳಿಸಲು ಅವಕಾಶ ದೊರೆತುದಕ್ಕಾಗಿ ಹರ್ಷ ವ್ಯಕ್ತಪಡಿಸಿದರು.

-ಕೇಂದ್ರ ಸಚಿವ ಪಿಯುಷ್ ಗೋಯಲ್ ವಿಷಯ ಮಂಡಿಸಿ, ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

----------------------------------------------------------

know_the_cm

(Davos, Switzerland), January 23, 2020

States have to gear up for high economic activities to realize PM's 5 trillion economy - Chief Minister

-Chief Minister B S Yediyurappa made his presence felt at the WEF’s “strategic outlook: India ” session which was addressed by union minister Piyush Goyal.

-Chief minister who got an occasion to sum up the panel discussions said states growth is vital for the country’s economy as all economic activities in India happen in states. If we have to make the Prime minister Narendra Modi’s five trillion economy a reality , then states have to gear up for high economic activities.

-Yediyurappa said: My home state of Karnataka has a state GDP of 250 billion dollars and a growing rate of nine percent”. “We are here at the WEF to meet investors and industrialists to invite them to invest and grow their business in India”, he claimed adding that he is optimistic and looking forward eagerly to see investors making a rush to Karnataka.

-“ I am delighted to know that investors have taken note of the Prime minister Narendra Modi’s vision of five trillion economy” he added. “ I am feeling elated following WEF selecting him for summing up and commenting on the session’s deliberations” he said and thanked the WEF organizers for giving this opportunity to speak at WEF.

-Union minister Piyush Goal also addressed and participated in the [panel discussion.

*************