ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕರೋನ ವೈರಸ್ ಸೋಂಕಿನ ಕುರಿತು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಕಾನ್ಫರೆನ್ಸ್ ಕುರಿತು ನಡೆದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

know_the_cm

(ವಿಧಾನಸೌಧ,ಬೆಂಗಳೂರು), ಮಾರ್ಚ್ 16, 2020

1. ಕೋವಿಡ್ 19 ಅಥವಾ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಚ್ 13 ರಂದು ಹೊರಡಿಸಿದ ಆದೇಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತಂದಿರುವ ಬಗ್ಗೆ ಪರಿಶೀಲನೆಗಾಗಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ. ವಿಜಯ ಭಾಸ್ಕರ್, ಆರೋಗ್ಯ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಡಿಯೋ ಕಾನ್ಫರೆನ್ಸ್ ನಲ್ಲಿ ನೀಡಲಾದ ಸೂಚನೆಗಳು:

2. ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು, ಆದೇಶಗಳನ್ನು ನಿಗದಿತ ಅವಧಿಯ ವರೆಗೆ ಕಟ್ಟುನಿಟ್ಟಾಗಿ ಜಾರಿಯಾಗಿರುವ ಬಗ್ಗೆ ಸೂಕ್ತ ಮೇಲ್ವಿಚಾರಣೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

3. ಮಂಡ್ಯ, ಮೈಸೂರು, ವಿಜಯಪುರ, ಬಳ್ಳಾರಿ, ಕೊಪ್ಪಳ, ಕೊಡಗು ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ ಮಾಡಲಾಗಿದೆ.

4. ಹೋಮ್ ಸ್ಟೇಗಳ ಬಗ್ಗೆ ವಿಶೇಷ ನಿಗಾ ವಹಿಸಲು ಸೂಚಿಸಲಾಯಿತು.

5. ಹೊರದೇಶದಿಂದ ಬಂದವರನ್ನು ಹೋಂ ಕ್ವಾರಂಟೈನ್ನಲ್ಲಿಟ್ಟಿರುವ ಬಗ್ಗೆ ಮಾಹಿತಿ ಪಡೆಯಲಾಗಿದೆ.

6. ವಿದೇಶಿ ಪ್ರವಾಸಿಗರು, ವಿದೇಶ ಪ್ರಯಾಣದಿಂದ ಹಿಂತಿರುಗಿದವರ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ.

7. ಪ್ರತಿ ದಿನ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಭೆ ನಡೆಸಿ ಜಿಲ್ಲೆಯಲ್ಲಿನ ಪರಿಸ್ಥಿತಿ ಅವಲೋಕಿಸಲು ಸೂಚನೆ ನೀಡಲಾಗಿದೆ.

8. ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗಳಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರ ಪಡೆಯಲು ಸೂಚಿಸಲಾಗಿದೆ.

9. ರಾಜ್ಯದ ಗಡಿ ಭಾಗಗಳಲ್ಲಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪನೆ, ಚೆಕ್ಪೋಸ್ಟ್ಗಳಲ್ಲಿ ಪ್ರಯಾಣಿಕರ ಸ್ಕ್ರೀನಿಂಗ್ಗೆ ಕ್ರಮ ವಹಿಸಲು ಸೂಚಿಸಲಾಗಿದೆ.

10. ಜಾತ್ರೆ ಸಂತೆಗಳನ್ನು ನಿಷೇಧಿಸಲಾಗಿದೆ. ದೊಡ್ಡ ಪ್ರಮಾಣದಲ್ಲಿ ದೇವಸ್ಥಾನಗಳಿಗೆ ಜನರು ಭೇಟಿ ನೀಡುವ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

11. ಔಷಧಿಗಳನ್ನು ಕರ್ನಾಟಕ ಡ್ರಗ್ಸ್ ಲಾಜಿಸ್ಟಿಕ್ಸ್ ಸಂಸ್ಥೆಯಿಂದ ಪಡೆಯಲು ಸೂಚಿಸಲಾಗಿದೆ.

12. ರೈಲು ನಿಲ್ದಾಣ, ಬಸ್ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ನಡೆಸಲಾಗುತ್ತಿದೆ.

13. ಬೀದರ್, ವಿಜಯಪುರ ಜಿಲ್ಲೆಗಳಿಗೆ ಹೆಚ್ಚುವರಿ ವೆಂಟಿಲೇಟರ್ ಒದಗಿಸಲು ಬೇಡಿಕೆ ಸಲ್ಲಿಸಿದ್ದಾರೆ. ಒದಗಿಸಲು ಕ್ರಮ ವಹಿಸಲಾಗುವುದು. ಮಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚುವರಿ ಪ್ರಯೋಗಾಲಯ ಸ್ಥಾಪಿಸಲಾಗುವುದು.

14. ಅಗತ್ಯ ವಸ್ತುಗಳ ಖರೀದಿಗೆ ಅನುಕೂಲ ಕಲ್ಪಿಸಲು ಸೂಪರ್ ಮಾರ್ಕೆಟ್ ತೆರೆಯಲು ಅನುಮತಿ ನೀಡಲು ಸೂಚಿಸಲಾಯಿತು.

15. ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುವಾಗ ಸಾರ್ವಜನಿಕರಿಗೆ ತೊಂದರೆ ನೀಡಬಾರದು ಎಂದು ನಿರ್ದೇಶನ ನೀಡಲಾಗಿದೆ.

16. ಕೋವಿಡ್ 19 ಶಂಕಿತ ಪ್ರಕರಣಗಳನ್ನು ಜಿಲ್ಲಾ ಮಟ್ಟದ ಆಸ್ಪತ್ರೆಯಲ್ಲಿಯೇ ನಿರ್ವಹಿಸಲು ಸೂಚಿಸಲಾಯಿತು.

17. ಬೆಂಗಳೂರಿನಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲು ಸೂಚಿಸಲಾಯಿತು.

18. ಬೆಂಗಳೂರಿನಲ್ಲಿ ಹೆಚ್ಚಿನ ಸೌಲಭ್ಯ ಸೂಚನೆ ನೀಡಲಾಯಿತು.

19. ಶುದ್ಧ ಕುಡಿಯುವ ನೀರು ಸರಬರಾಜಿಗೆ ಗಮನ ನೀಡಲು ಸೂಚಿಸಲಾಗಿದೆ.

---------------

know_the_cm

(Vidhana Soudha, Bengaluru), March 16, 2020

Highlights of the Video Conference held by Chief Minister B.S.Yediyurappa with DCs on 16-3-2020

The Video Conference was held to oversee the strict implementation of the orders issued by the State Government to prevent the spread of COVID -19 or Corona Virus in the State. Govind.M.karajol, Deputy Chief Minister, Basavaja Bommai, Minister for Home, Dr.K.Sudhakar, Minister for Medical Education, T.M.Vijayabhaskar, Chief Secretary to Government, Jawaid Akhtar, Additional Chief Secretary, Department of Health and other senior officers were present.

1. It is instructed to adhere to the guidelines/ orders issued by the Government until the said period and also to monitor whether it is being followed.

2. Entry is prohibited to tourists in Mandya, Mysuru, Vijayapura, Ballary, Koppal and Kodagu districts.

3. It has been instructed to keep Home stays under scrutiny.

4. Foreign tourists and people who have returned from foreign tours are screened thoroughly.

5. It is instructed to conduct District level Task Force meetings on a daily basis and take stock of the situation.

6. It has been directed to seek cooperation from private Medical Colleges in districts where there is no Government Medical College.

7. It has been instructed to establish Help Desks in Railway Stations, Bus Stands and Check posts at the border areas of the State.

8. Since people visit the temples in large numbers all shanties and Jathras have been prohibited. It is instructed to take precautionary measures.

9. Instructions have been given to avail medicines from Karnataka Drugs Logistics Company.

10. Screenings are being undertaken at Railway Stations and Bus Stands.

11. There is demand to supply additional ventilators to Bidar and Vijayapura districts. We are taking measures to supply the same. Additional Laboratories will be established in Mangaluru and Kalburgi districts as per the guidelines issued by the Central Government.

12. Super markets have been permitted to open doors to facilitate purchase of essential commodities.

13. Officials have been directed to make sure that the public are not put to unnecessary difficulty while taking precautionary measures.

14. Suspected cases of COVID -19 are to be treated at the district level.

15. It has been directed to create additional facilities at Bengaluru.

16. It has been instructed to ensure cleanliness and supply of safe drinking water to the people.

*************