ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ನಾಡೋಜ, ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

know_the_cm

(ವಿಧಾನಸೌಧ,ಬೆಂಗಳೂರು), ಮಾರ್ಚ್ 16, 2020

-ನಾಡೋಜ, ಖ್ಯಾತ ಪತ್ರಕರ್ತ ಹಾಗೂ ಲೇಖಕ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಶತಾಯುಷಿ ಪಾಟೀಲ ಪುಟ್ಟಪ್ಪನವರು ಸ್ವಾತಂತ್ರ್ಯ ಹೋರಾಟಗಾರರಾಗಿ ಪತ್ರಿಕೋದ್ಯಮ, ಸಾಹಿತ್ಯ ರಚನೆ ಮತ್ತು ಕನ್ನಡಪರ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದವರು. ಕನ್ನಡಿಗರಿಗೆ ‘ಪಾಪು’ ಎಂದೇ ಪರಿಚಿತರಾಗಿದ್ದ ಇವರು, ನವಯುಗ ಮಾಸ ಪತ್ರಿಕೆಯ ಸಂಪಾದಕರಾಗಿ ಹಾಗೂ ‘ಪ್ರಪಂಚ’ ಪತ್ರಿಕೆಯನ್ನು ಸ್ಥಾಪಿಸಿದ್ದಲ್ಲದೆ, ಸಾಹಿತಿಯಾಗಿ, ಅಂಕಣಕಾರರಾಗಿಯೂ ಗುರುತಿಸಿಕೊಂಡವರು.

-ಪಾಟೀಲ ಪುಟ್ಟಪ್ಪನವರು ಸಾರ್ವಜನಿಕ ರಂಗಗಳಲ್ಲಿಯೂ ಸಾಕಷ್ಟು ದುಡಿದವರು. ಎರಡು ಅವಧಿಗೆ ರಾಜ್ಯಸಭಾ ಸದಸ್ಯರಾಗಿ, ಕನ್ನಡ ಕಾವಲು ಮತ್ತು ಗಡಿ ಸಲಹಾ ಸಮಿತಿ ಸಂಸ್ಥಾಪನಾ ಅಧ್ಯಕ್ಷ, ಅಖಿಲ ಕರ್ನಾಟಕ ಹೋರಾಟ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ.

-ಪಾಟೀಲ ಪುಟ್ಟಪ್ಪನವರ ನಿಧನದಿಂದ ಕನ್ನಡ ನಾಡು ಧೀಮಂತ ವ್ಯಕ್ಯಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿರುವ ಮುಖ್ಯಮಂತ್ರಿಗಳು, ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಿ, ಅವರ ಕುಟುಂಬಕ್ಕೆ ದು:ಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

*************