ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಜನತಾ ಕರ್ಫ್ಯೂ: ಮುಖ್ಯಮಂತ್ರಿ ಮನವಿ

know_the_cm

(ಬೆಂಗಳೂರು), ಮಾರ್ಚ್ 21, 2020

-ಪ್ರಧಾನಿ ನರೇಂದ್ರ ಮೋದೀಜೀಯವರು ಕರೆ ನೀಡಿರುವಂತೆ ನಾಳೆ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ಜನತಾ ಕಫ್ರ್ಯೂ ಆಚರಣೆಗೆ ನಿಮ್ಮೆಲ್ಲರ ಬೆಂಬಲ ಅತಿ ಅಗತ್ಯವಾಗಿದೆ. ನಾಳೆ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ನಾವೆಲ್ಲರೂ ಮನೆಯಲ್ಲಿ ಉಳಿದು ನಿಜವಾದ ಅರ್ಥದಲ್ಲಿ ಕರ್ಫ್ಯೂವನ್ನು ಬೆಂಬಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡಿನ ಜನತೆಯಲ್ಲಿ ಮನವಿ ಮಾಡಿದ್ದಾರೆ.

-ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕರ್ನಾಟಕ ರಾಜ್ಯವು ದೇಶದಲ್ಲಿ ಕೊವಿಡ್-19 ವೈರಾಣು ಹರಡುವಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಇದೆಲ್ಲದಕ್ಕೂ ರಾಜ್ಯದ 6.5 ಕೋಟಿ ಜನರ ನೈತಿಕ ಮತ್ತು ಸಾಂಘಿಕ ಬೆಂಬಲ ಕಾರಣ”.

-“ಈ ಸಮಯದಲ್ಲಿ ನನ್ನ ಕಳಕಳಿಯ ಮನವಿಯೆಂದರೆ ರಾತ್ರಿ 9.00 ಗಂಟೆಯ ನಂತರ ಕರ್ಪೂ ಅವಧಿ ಮುಗಿದಿದೆ ಎಂದು ಎಲ್ಲರೂ ಮನೆಯ ಹೊರಗಡೆ ಬಂದು ಸಂಭ್ರಮಿಸುವುದಾಗಲೀ, ಅಥವಾ ನಿಮ್ಮ ದಿನ ನಿತ್ಯದ ಚಟುವಟಿಕೆಗಳಲ್ಲಿ ತೊಡಗಿಸುವುದಾಗಲೀ ಮಾಡಬೇಡಿ. ಇದು ಬೆಳಿಗ್ಗೆಯಿಂದ ಆಚರಿಸಿದ ರೋಗ ತಡೆಯುವ ಕ್ರಮವಾದ ಕಫ್ರ್ಯೂವನ್ನು ಅರ್ಥರಹಿತವಾಗಿಸುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ನಿಮಗೆ 9 ಗಂಟೆಯಿಂದ ಮನೆ ಹೊರಗಡೆ ಬರದೆ ಮನೆಯವರೆಲ್ಲರೂ ಆಪ್ತರೊಂದಿಗೆ ಕಾಲಕಳೆಯಲು ಮನವಿ ಮಾಡಿರುತ್ತಾರೆ. ಆವಾಗ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯ ಕರ್ಪೂಗೆ ಒಂದು ಅರ್ಥ ಬರುತ್ತದೆ ಮತ್ತು ಸಾರ್ಥಕವಾಗಲಿದೆ. ಇನ್ನೊಮ್ಮೆ ನನ್ನ ಕಳಕಳಿಯ ಮನವಿ ನೀವು ಯಾರೂ ರಾತ್ರಿ 9 ಗಂಟೆಯ ನಂತರ ಹೊರಗೆ ಬರಬೇಡಿ”.

-“ಆದರೆ ಸಂಜೆ 5 ಗಂಟೆಗೆ ನಿಮ್ಮ ಮನೆಯ ಕಿಟಕಿಗಳಿಂದ ಮತ್ತು ಛಾವಣಿಗಳ ಮೇಲಿಂದ ಚಪ್ಪಾಳೆ ತಟ್ಟಿ ಸರಕಾರದ ಮತ್ತು ರೋಗ ತಡೆಯುವಲ್ಲಿ ಭಾಗಿಯಾಗಿರುವ ಜನರಿಗೆ ನೈತಿಕ ಬೆಂಬಲ ಸೂಚಿಸಲು ಮಾತ್ರ ಮರೆಯಬೇಡಿ” ಎಂದು ಅವರು ತಿಳಿಸಿದ್ದಾರೆ.

-----------------------

(Bengaluru), March 21, 2020

Chief Minister’s Appeal on Janata Curfew

-Chief Minister B.S. Yediyurappa has appealed to the people of the State to extend support to the call for Janata Curfew on Sunday.

-In a press release, he said, “Karnataka government has so for dealing successfully in containing the Covid-19 virus . This has happened because of people’s co-operation.

-Meanwhile, Prime minster has given a clarion call for a "Janata curfew" on Sunday from morning seven to night nine and you people have extended both moral and societal support to this unique curfew.”

-“Now, my appeal to people on behalf of Prime minister Narendra Modiji is, don't come on roads and out of your dwellings immediately after Nine in the night when curfew time ends. Remain settled in your houses and bungalows avoiding all public appearances on roads and other public places.”

-“Your coming out in open can nullify the 14 hour measure to contain the spread of virus. As a co-operation to authorities and the society, please remain indoor and stay with your near and dear ones”.

-“Once again, I sincerely appeal to you all to abide by my and prime minister Narendra Modijis request on this score.

-But don't forget to appear at the window sides and on the rooftops to involve in a bout of applause as a mark of appreciation to people involved in containing the spread of virus and treating the diseased.

*************