ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಗೆ ಮುಖ್ಯಮಂತ್ರಿ ಅಭಿನಂದನೆ

know_the_cm

(ಬೆಂಗಳೂರು), ಮಾರ್ಚ್ 26, 2020

-ಕೋವಿಡ್_19 ಪಿಡುಗಿನಿಂದ ಜನಜೀವನದ ಮೇಲೆ ಆಗುವ ದುಷ್ಪರಿಣಾಮಗಳನ್ನು ತಡೆಯಲು ಕೇಂದ್ರ ಸರ್ಕಾರವು ರೂ.1.70 ಲಕ್ಷ ಕೊಟಿ ಹಣ ಬಿಡುಗಡೆ ಮಾಡಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

-“ಸಂಕಷ್ಟದ ಈ ಸಮಯದಲ್ಲಿ ಕೇಂದ್ರ ಸರಕಾರದ ಈ ನಿರ್ಧಾರವು, ಬಡವರನ್ನು ರೈತರನ್ನು, ಮಹಿಳೆಯರನ್ನು ಮತ್ತು ಕೂಲಿ ಕಾರ್ಮಿಕರನ್ನು ನೆಮ್ಮದಿಯಾಗಿ ಬದುಕಲು ಅನುವು ಮಾಡಿಕೊಡುವುದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು #ಕೋವಿಡ್_19 ರ ವಿರುದ್ಧ ತೆಗೆದುಕೊಂಡ ಕ್ರಮಗಳನ್ನು ಹೆಚ್ಚು ಗಂಭೀರವಾಗಿ ಮತ್ತು ಚುರುಕಾಗಿ ಅನುಷ್ಠಾನಗೊಳಿಸುವಲ್ಲಿ ಸಹಕಾರಿಯಾಗುತ್ತದೆ.”

-“ಬಡವರ ಹಸಿವಿನ ಅರ್ಥ ಅರಿತುಕೊಂಡ ಸರ್ಕಾರವು, 80 ಕೋಟಿ ಜನರಿಗೆ ಪ್ರತಿ ತಿಂಗಳು 5 ಕೆ.ಜಿ. ಹೆಚ್ಚುವರಿ ಗೋಧಿ ಅಥವಾ ಅಕ್ಕಿ ಮತ್ತು 1 ಕೆ.ಜಿ. ಬೇಳೆಯನ್ನು ಕೊಡುವ ಒಂದು ದೊಡ್ಡ ಅಸಾಧಾರಣ ನಿರ್ಧಾರವನ್ನು ತೆಗೆದುಕೊಂಡಿದೆ.”

-“ಮಹಿಳೆಯರ ಜನಧನ್ ಖಾತೆಗೆ ಪ್ರತಿ ತಿಂಗಳು ರೂ.500 ರಂತೆ 3 ತಿಂಗಳಿಗೆ ರೂ. 1500/- ಗಳನ್ನು ಮುಂಗಡವಾಗಿ ಹಣ ನೇರವಾಗಿ ವರ್ಗಾವಣೆ ಮಾಡುವುದು, ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿನ ರೂ. 2,000 ಹಣವನ್ನು ಮುಂಗಡವಾಗಿ ಕೊಡುವುದು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಯೋಜನೆ ಮೊತ್ತವನ್ನು ರೂ. 10 ಲಕ್ಷದಿಂದ 20 ಲಕ್ಷಕ್ಕೆ ಏರಿಸಿದ್ದು ಇದರಿಂದ 63 ಲಕ್ಷ ಮಹಿಳಾ ಸ್ವಸಹಾಯ ಸಂಘಗಳಿಗೆ ಲಾಭವಾಗಲಿದೆ. 8.3 ಕೋಟಿ ಗೃಹಿಣಿಯರಿಗೆ ಉಜ್ವಲ್ ಯೋಜನೆ ಅಡಿ 3 ಉಚಿತ ಗ್ಯಾಸ್ ಸಿಲಿಂಡರ್ಗಳನ್ನು ನೀಡುವುದು, ಸಂಘಟಿತ ವಲಯದ ಕಾರ್ಮಿಕರಿಗೆ ಇ.ಪಿ.ಎಫ್. ಮೇಲೆ ಸಾಲ ಸೌಲಭ್ಯ ಮತ್ತು ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ದರವನ್ನು ರೂ.182 ರಿಂದ ರೂ.202 ಏರಿಸಿದ್ದು, ದೇಶದ ಬಡವರು ಇಂತಹ ಸಂದಿಗ್ಧ ಸಮಯದಲ್ಲಿ ಹಸಿವಿನಿಂದ ಬಳಲದಂತೆ ಮಾಡುತ್ತದೆ.”

-“ಇದರ ಜೊತೆಗೆ ವಯೋವೃದ್ಧರಿಗೆ, ವಿಧವೆಯರಿಗೆ ರೂ.1000/- ಗೌರವಧನವನ್ನು 3 ತಿಂಗಳವರೆಗೆ ಕೊಡುವುದು ಒಳ್ಳೆಯ ನಿರ್ಧಾರ. ಇದಲ್ಲದೇ ಕೇಂದ್ರ ಸರ್ಕಾರದಿಂದ ಉದ್ಯಮ ವಲಯಕ್ಕೆ ಹಲವಾರು ಹಣಕಾಸು ಸಹಾಯಕ ಯೋಜನೆಗಳನ್ನು ಕೊಡಮಾಡಿ ಕೋವಿಡ್_19 ಮಹಾಮಾರಿಯ ಪರಿಣಾಮದಿಂದ ಉಂಟಾದ ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸುವಲ್ಲಿ ಸಹಕಾರಿಯಾಗಲಿದೆ.”

-“ಬಡವರಿಗೆ ಇಷ್ಟೊಂದು ದೊಡ್ಡಮಟ್ಟದ ಹಣಕಾಸು ಸಹಾಯ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಇನ್ನೊಮ್ಮೆ ಅಭಿನಂದಿಸುತ್ತೇನೆ” ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------

Chief Minister Welcomes Prime minister Garib Kalyan Yoajna

-Chief Minister shri B S Yediyurappa has congratulated Prime Minister Narendra Modiji and Union Finance Minister Smt. Nirmala Seetharaman for rolling out Garib Kalyan scheme of Rs 1.7 lakh crore when the country is struggling hard to fight the covid_19 menace.

-In a press release he said, “Prime Minister's decision of announcing various sops and subsidies for the poor, farmers, women, aged and widows and the people working organized sector will prevent the poor and needy from suffering from hunger“.

-"This scheme will allow farmers, women, laborers and the poor to lead a hunger free life in these difficult times"

-“Especially, Rs 2000 advance to farmers under Kisan Samman yojana, Rs 500 monthly to Jana Dhan accounts, three free gas cylinders under Uajala Yojana to more than 8 crore women, raising of Loan amount from Rs ten lakh to twenty lakhs benefitting more than 63 lakh women SHGs, hike in wages under MGNREGA from Rs 182 to Rs 202 and sanctioning loan to EPF account holders are remarkable steps taken by the union government to help the poor”.

-“Most striking feature of this Garib Kalyan yojana is the supply of five kg rice or wheat and one kg pulses to 80 crore people. This will ensure people living below the poverty line do not go hungry in these trying times of a nation-wide lock down when they are required to stay indoors."

-“PM's decision to give Rs 1000 ex-gratia to the elderly and widows will help our country's poor elderly men and women provide for their their basic needs.

-“ The Prime Minister's decision to give various subsidies and finance benefits to industries, and the organized sector workers will go a long way in sustaining and stabilizing the country's economy which remains paralyzed due tot he pandemic."

-I, once again, thank Prime Minister Modiji for this timely gesture and the benefits being given to the poor”, he said.

*************