ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕೇಂದ್ರದ ಮಾಜಿ ಸಚಿವ ಎಂ ವಿ ರಾಜಶೇಖರನ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

know_the_cm

(ಬೆಂಗಳೂರು), ಏಪ್ರಿಲ್ 13, 2020

-ಕೇಂದ್ರದ ಮಾಜಿ ಸಚಿವ ಎಂ ವಿ ರಾಜಶೇಖರನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಎಂ ವಿ ಆರ್ ಅವರು ಸರಳತೆ, ಸಜ್ಜನಿಕೆಯ ಪ್ರಬುದ್ಧ ರಾಜಕಾರಣಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಅಳಿಯನಾದ ಅವರು, ಗ್ರಾಮೀಣ ಆರ್ಥಿಕತೆಯ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಗ್ರಾಮೀಣ ಅಭಿವೃದ್ಧಿ ಕುರಿತು ಅಧ್ಯಯನ ಸಂಸ್ಥೆಯೊಂದನ್ನು ಸ್ಥಾಪಿಸಿದ್ದರು.

-ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಅತ್ಯುತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು.

-ಡಾ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿ ಅಂಶ ಖಾತೆಯ ರಾಜ್ಯ ಸಚಿವರಾಗಿ ಹೊಣೆಗಾರಿಕೆ ನಿಭಾಯಿಸಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ.

-ಮೌಲ್ಯಾಧಾರಿತ ರಾಜಕಾರಣದಿಂದಾಗಿಯೇ ಗುರುತಿಸಿಕೊಂಡಿದ್ದ ಅವರ ನಿಧನ ಅತ್ಯಂತ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗ, ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

*************