ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕುಡಿವ ನೀರಿಗಾಗಿ ಮಹಾರಾಷ್ಟ್ರಕ್ಕೆ ಮುಖ್ಯಮಂತ್ರಿ ಮನವಿ

know_the_cm

(ಬೆಂಗಳೂರು), ಮೇ 03, 2020

-ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದು, ಮಹಾರಾಷ್ಟ್ರದ ಜಲಾಶಯಗಳಿಂದ ಕರ್ನಾಟಕದ ನದಿಗಳಿಗೆ ನೀರು ಹರಿಸುವಂತೆ ಕೋರಿದ್ದಾರೆ.

-ರಾಜ್ಯದ ಬೆಳಗಾವಿ, ವಿಜಯಪುರ, ಬಾಗಲಕೋಟ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ತೊಂದರೆಯಿದ್ದು, ಮಹಾರಾಷ್ಟ್ರ ದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ತಲಾ 3.00 ಟಿಎಂಸಿ ನೀರು ಬಿಡುವಂತೆ ಮನವಿ ಮಾಡಿದ್ದಾರೆ.

know_the_cm

*************