ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕವಿ ಕೆ ಎಸ್ ನಿಸಾರ್ ಅಹಮದ್ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

know_the_cm

(ಬೆಂಗಳೂರು), ಮೇ 03, 2020

-ಕನ್ನಡದ ಹಿರಿಯ ಕವಿ, ಕೆ ಎಸ್ ನಿಸಾರ್ ಅಹಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಅತ್ಯುತ್ತಮ ಕವನ ಸಂಕಲನಗಳನ್ನು ಕನ್ನಡಕ್ಕೆ ನೀಡಿದ ಅವರು, ನಿತ್ಯೋತ್ಸವ ಕವಿ ಎಂದೇ ಪ್ರಖ್ಯಾತಿ ಪಡೆದು ಕನ್ನಡಿಗರ ಮನೆ ಮಾತಾಗಿದ್ದರು. ಶಿವಮೊಗ್ಗದಲ್ಲಿ ಕೆಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು ಹಾಗೂ ವಿಶೇಷ ಬಾಂಧವ್ಯ ಹೊಂದಿದ್ದರು.

-2007ರಲ್ಲಿ ಶಿವಮೊಗ್ಗದಲ್ಲಿ ನಡೆದ 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ, ಪದ್ಮಶ್ರೀ ಸೇರಿದಂತೆ ಅನೇಕ ಪ್ರಶಸ್ತಿ ಗೆ ಭಾಜನರಾಗಿದ್ದ ಅವರು, ಕನ್ನಡದ ಎಲ್ಲ ಪ್ರಾಕಾರಗಳನ್ನು ಶ್ರೀಮಂತಗೊಳಿಸಿದ್ದರು.

-ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಮುಖ್ಯ ಕೊಂಡಿಯೊಂದು ಕಳಚಿ ಬಿದ್ದಂತಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

*************