ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮುಖ್ಯಮಂತ್ರಿ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜತೆ ನಡೆಸಿದ ಸಭೆಯ ಮುಖ್ಯಾಂಶಗಳು

know_the_cm

(ಗೃಹ ಕಚೇರಿ ಕೃಷ್ಣಾ,ಬೆಂಗಳೂರು), ಮೇ 10, 2020

-ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದರು. ಬೇರೆ ಬೇರೆ ದೇಶ ಹಾಗೂ ರಾಜ್ಯಗಳಿಂದ ಕನ್ನಡಿಗರು ವಾಪಸ್ ಬರುತ್ತಿದ್ದು, ಅವರನ್ನು ಯಾವ ರೀತಿ ಕ್ವಾರಂಟೈನ್ ಮಾಡಬೇಕು ಎಂಬ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು.

ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳು

-ಹೊರ ರಾಜ್ಯದಿಂದ ಬರುವ ಕನ್ನಡಿಗರು ನಿರ್ದಿಷ್ಟ ವ್ಯವಸ್ಥೆಯಡಿ ಬರುವಂತೆ ಮಾಡಬೇಕು.

-ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಆನ್ ಲೈನ್ ನಲ್ಲಿ ರಿಜಿಸ್ಟರ್ ಮಾಡಬೇಕು.

-ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ರಾಜ್ಯದಿಂದ ಅನಿವಾರ್ಯವಾಗಿ ಹೊರ ಹೋಗಿ ಸಿಲುಕಿ ಕೊಂಡಿರುವವರಾಗಿರಬೇಕು.

-ಎಲ್ಲಿಗೆ ಬರುತ್ತೇವೆ ಮತ್ತು ಎಂದು ಬರುತ್ತೇವೆ ಅನ್ನೋದನ್ನ ರಿಜಿಸ್ಟರ್ ಮಾಡಬೇಕು.

-ಕ್ವಾರಂಟೈನ್ ಸೌಲಭ್ಯಕ್ಕೆ ಅನುಗುಣವಾಗಿ ಕರೆಸಿಕೊಳ್ಳಲಾಗುವುದು.

-ಬಂದ ತಕ್ಷಣ ಯಾರೂ ಅವರ ಊರಿಗೆ ಹೋಗುವಂತಿಲ್ಲ, ಬಂದ ಎಲ್ಲರೂ 14 ದಿನ ಕ್ವಾರಂಟೈನ್ ಆಗಲೇಬೇಕು.

-ಕ್ವಾರಂಟೈನ್ ಗೆ ಸಿದ್ಧವಿದ್ದವರು ಮಾತ್ರ ನೋಂದಣಿ ಮಾಡಿಕೊಳ್ಳಬೇಕು.

-ಹೊರ ರಾಜ್ಯದಿಂದ ರೈಲುಗಳಲ್ಲಿ ಬರುವವರಿಗೆ ರಾಜ್ಯ ಸರ್ಕಾರವೇ ವೆಚ್ಚ ಭರಿಸುತ್ತದೆ.

-ಬೇರೆ ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದರೂ ಇಲ್ಲಿಯೂ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಲೇಬೇಕು.

-ಇನ್ನು ಮುಂದೆ ಬೇರೆ ರಾಜ್ಯದಲ್ಲಿ ಮೃತರಾದರೆ ಶವಗಳನ್ನು ರಾಜ್ಯಕ್ಕೆ ತರುವಂತಿಲ್ಲ.

-ಎಲ್ಲಿ ಮೃತರಾಗಿರುತ್ತಾರೋ ಅಲ್ಲಿಯೇ ಅಂತ್ಯ ಸಂಸ್ಕಾರ ಮಾಡಬೇಕು.

-ರಾಜ್ಯದಲ್ಲಿ ತೀರಿಕೊಂಡರೆ ತೀರಿಕೊಂಡ ಸ್ಥಳದಲ್ಲಿಯೇ ಅಂತ್ಯಕ್ರಿಯೆ ಮಾಡಬೇಕು.

-ಸಭೆಯಲ್ಲಿ ಉಪಮುಖ್ಯಮಂತ್ರಿ ಗಳಾದ ಗೋವಿಂದ ಎಂ. ಕಾರಜೋಳ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಸುರೇಶ್ ಕುಮಾರ್. ಆರ್ ಅಶೋಕ್. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಮತ್ತು ಇತರ ಹಿರಿಯ ಅಧಿಕಾರಿಗಳು, ತಜ್ಞ ವೈದ್ಯರು ಭಾಗವಹಿಸಿದ್ದರು.

*************