ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಜಲಸಮಾಧಿ: ಮಂಡ್ಯದ ಏಳು ಮಂದಿಗೆ ಪರಿಹಾರ

know_the_cm

(ಬೆಂಗಳೂರು), ಜೂನ್ 15, 2020

-ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು ಜಲಸಮಾಧಿಯಾದ ಏಳು ಮಂದಿಗೆ 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಯಿಂದ ಒಟ್ಟು 23 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸಲು ಸೂಚಿಸಿದ್ದಾರೆ.

-ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಶ್ರೀಮತಿ ಗೀತಾ, ಕು ಸವಿತಾ ಹಾಗೂ ಕು ಸೌಮ್ಯ ಅವರಿಗೆ ತಲಾ 5 ಲಕ್ಷ ರೂಗಳು ಹಾಗೂ ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ಕು ರಶ್ಮಿ ಮತ್ತು ಕು ಇಂಚರಾ, ಕೆ ಆರ್ ಪೇಟೆ ತಾಲ್ಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರಿಗೆ ತಲಾ 2 ಲಕ್ಷ ರೂಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

*************