ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ನವದೆಹಲಿಯಲ್ಲಿ ಮುಖ್ಯಮಂತ್ರಿ ಅವರು ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.

ಮಾನ್ಯ ಮುಖ್ಯಮಂತ್ರಿ

ಪ್ರಧಾನಿ ಮೋದಿ - ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ, ಪ್ರವಾಹ ಪೀಡಿತ ಕರ್ನಾಟಕಕ್ಕೆ ಕೂಡಲೇ ಅನುದಾನ ಬಿಡುಗಡೆಗೆ ಮನವಿ.

(ನವದೆಹಲಿ), ಆಗಸ್ಟ್ 16, 2019

-ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ವಿವರಿಸಿ, ಪರಿಹಾರ ಕಾರ್ಯಗಳಿಗೆ ಶೀಘ್ರವೇ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

-ರಾಜ್ಯದಲ್ಲಿ ಆಗಸ್ಟ್ 3ರಿಂದ 10ರವರೆಗೆ ವಾಡಿಕೆಗಿಂತ ಶೇ. 279ರಷ್ಟು ಹೆಚ್ಚು ಮಳೆಯಾಗಿದೆ. ಕಳೆದ 118 ವರ್ಷಗಳಲ್ಲೇ ಇದು ದಾಖಲೆ ಮಳೆಯಾಗಿದೆ ಎಂದು ತಿಳಿಸಿದರು.

-ಮಹಾರಾಷ್ಟ್ರ ರಾಜ್ಯದಿಂದ ಕೃಷ್ಣಾ ನದಿ ಒಳಹರಿವು ದಿನಕ್ಕೆ 6 ಲಕ್ಷ ಕ್ಯುಸೆಕ್ ತಲುಪಿರುವ ಹಿನ್ನೆಲೆಯಲ್ಲಿ ಪ್ರವಾಹ ಮತ್ತಷ್ಟು ಹೆಚ್ಚಾಗಿತ್ತು ಎಂದರು.

-ರಾಜ್ಯದಲ್ಲಿ 61 ಮಂದಿ ಸಾವನ್ನಪ್ಪಿದ್ದು, 15 ಮಂದಿ ನಾಪತ್ತೆಯಾಗಿದ್ದಾರೆ. 58,620 ಮನೆಗಳಿಗೆ ಹಾನಿಯಾಗಿದ್ದು, 4.7 ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ. 18 ಸಾವಿರ ಕಿಮೀ ರಸ್ತೆ, 650 ಸೇತುವೆಗಳು, 54,000 ವಿದ್ಯುತ್ ಕಂಬ, ಟ್ರಾನ್ಸ್ಫಾರ್ಮರುಗಳಿಗೆ ತೀವ್ರ ಹಾನಿಯಾಗಿದೆ ಎಂದು ಪ್ರಧಾನಿಗೆ ವಿವರಿಸಿದರು.

ಮಾನ್ಯ ಮುಖ್ಯಮಂತ್ರಿ

-1224 ಪರಿಹಾರ ಕೇಂದ್ರಗಳನ್ನು ತೆರೆದು ಸುಮಾರು 4 ಲಕ್ಷ ಜನರಿಗೆ ಆಶ್ರಯ ನೀಡಲಾಗಿದೆ. ಅವರಿಗೆ ಆಹಾರ, ಕುಡಿಯುವ ನೀರು ಮತ್ತು ವೈದ್ಯಕೀಯ ನೆರವು ನೀಡಲಾಗಿದೆ ಎಂದರು. ಪ್ರತಿ ಕುಟುಂಬಕ್ಕೆ ತಾತ್ಕಾಲಿಕ ಪರಿಹಾರವಾಗಿ 10 ಸಾವಿರ ರೂ., ಮನೆ ಹಾನಿಯಾದವರಿಗೆ ದುರಸ್ತಿಗೆ 1 ಲಕ್ಷ ರೂ. ಹಾಗೂ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ನೆರವು ನೀಡಲಾಗುತ್ತಿದೆ. ತೀವ್ರ ಹಾನಿಗೊಳಗಾಗಿರುವ 200 ಗ್ರಾಮಗಳನ್ನು ಸ್ಥಳಾಂತರಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

-ರಾಜ್ಯದಲ್ಲಿ ಸಂಭವಿಸಿರುವ ಹಾನಿಯ ಮೊತ್ತ 40 ಸಾವಿರ ಕೋಟಿ ರೂ.ವರೆಗೆ ಇರಬಹುದು ಎಂದು ಪ್ರವಾಹದ ಭೀಕರತೆಯನ್ನು ಪ್ರಧಾನಿಗೆ ಮನದಟ್ಟು ಮಾಡಿದರು.

-ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಗಂಭೀರತೆಯ ಕುರಿತು 45 ನಿಮಿಷಗಳ ಕಾಲ ಚರ್ಚಿಸಿ, ಪ್ರಧಾನಿಗೆ ಮನವರಿಕೆ ಮಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ನಷ್ಟ ಸಂಭವಿಸಿದೆ. ಪುನರ್ನಿಮಾಣ ಮತ್ತು ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ವಿವರಿಸಿದರು.

-ಈ ಮಾಹಿತಿಗಳನ್ನು ಪಡೆದ ಪ್ರಧಾನಿ, ತಕ್ಷಣವೇ ನಷ್ಟದ ಅಂದಾಜು ಮಾಡಲು ಕೇಂದ್ರ ಅಧ್ಯಯನ ತಂಡವನ್ನು ಕಳುಹಿಸುವುದಾಗಿ ತಿಳಿಸಿದರು. ತಂಡದ ವರದಿ ಆಧರಿಸಿ, ಮಧ್ಯಂತರ ಪರಿಹಾರ ನೀಡುವ ಕುರಿತು ಹಾಗೂ ಪರಿಹಾರ ಮೊತ್ತದ ಕುರಿತು ತೀರ್ಮಾನಿಸುವುದಾಗಿ ಪ್ರಧಾನಿ ತಿಳಿಸಿದರು.

ಮಾನ್ಯ ಮುಖ್ಯಮಂತ್ರಿ

-ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಉಪಸ್ಥಿತರಿದ್ದರು.

..............................................................................

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

(ನವದೆಹಲಿ), ಆಗಸ್ಟ್ 16, 2019

ಮಾನ್ಯ ಮುಖ್ಯಮಂತ್ರಿ

-ಈ ಸಂದರ್ಭದಲ್ಲಿ ಬೆಂಗಳೂರು ಸಬ್ಅರ್ಬನ್ ರೈಲ್ವೆ, ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ಬಲವರ್ಧನೆ, ಹಾಸನ - ಬೇಲೂರು- ಶೃಂಗೇರಿ ಹೊಸ ರೈಲು ಮಾರ್ಗ, ಬೀದರ್- ನಾಂದೇಡ್ ರೈಲು ಮಾರ್ಗ ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು.

-ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಷಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕರಾದ ಆರ್. ಅಶೋಕ್, ಜಗದೀಶ್ ಶೆಟ್ಟರ್ ಇದ್ದರು.

...............................................................................

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

(ನವದೆಹಲಿ), ಆಗಸ್ಟ್ 16, 2019

ಮಾನ್ಯ ಮುಖ್ಯಮಂತ್ರಿ

-ಈ ಸಂದರ್ಭದಲ್ಲಿ ಅವರು ಸರ್ಕಾರಿ ಸ್ವಾಮ್ಯದ ವಿಮಾನ ನಿಲ್ದಾಣಗಳ ಅಭಿವೃದ್ಧಿ, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದೊಂದಿಗೆ ಜಾಯಿಂಟ್ ವೆಂಚರ್ ಕಂಪೆನಿ ಸ್ಥಾಪನೆ, ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಚುರುಕುಗೊಳಿಸುವ ಕುರಿತು ಚರ್ಚಿಸಿದರು. ಕಾರ್ಯಾಚರಣೆಗೆ ಸಿದ್ಧವಾಗಿರುವ ಕಲಬುರಗಿ ವಿಮಾನ ನಿಲ್ದಾಣದ ಉದ್ಘಾಟನೆಗೆ ಆಗಮಿಸುವಂತೆ ಕೇಂದ್ರ ಸಚಿವರಿಗೆ ಆಹ್ವಾನಿಸಿದ ಮುಖ್ಯಮಂತ್ರಿ, ದಿನಾಂಕ ನಿಗದಿಪಡಿಸಲು ಕೋರಿದರು.

-ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಷಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕರಾದ ಆರ್. ಅಶೋಕ್, ಜಗದೀಶ್ ಶೆಟ್ಟರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾನ್ಯ ಮುಖ್ಯಮಂತ್ರಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

(ನವದೆಹಲಿ), ಆಗಸ್ಟ್ 17, 2019

ಮಾನ್ಯ ಮುಖ್ಯಮಂತ್ರಿ

-ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಿ ಕೂಡಲೇ ಪರಿಹಾರ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

...............................................................................

*********************************