ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಬೆಂಗಳೂರು ನಗರದಲ್ಲಿ ಕೋವಿಡ್ 19 ಪರಿಸ್ಥಿತಿ ಪರಿಶೀಲನೆ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು

know_the_cm

(ವಿಧಾನಸೌಧ,ಬೆಂಗಳೂರು), ಜೂನ್ 25, 2020

-ರೋಗಿಗಳು ಕಾಯುವ ಪರಿಸ್ಥಿತಿ ಬರಬಾರದು. ಪರೀಕ್ಷಾ ವರದಿ ಬಂದು ಸೋಂಕು ದೃಢ ಪಟ್ಟ ನಂತರ ತ್ವರಿತವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಕ್ರಮ ವಹಿಸಲು ಸೂಚಿಸಲಾಗಿದೆ. ಇದಕ್ಕಾಗಿ ಈಗ 100 ಅಂಬ್ಯುಲೆನ್ಸ್ ಗಳು ಲಭ್ಯವಿದ್ದು, ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಅಂಬ್ಯುಲೆನ್ಸ್ ಗಳನ್ನು ಈ ಉದ್ದೇಶಕ್ಕೆ ಬಳಸಲು ತೀರ್ಮಾನಿಸಲಾಯಿತು.

-ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ ಕೋವಿಡ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸಚಿವರಿಗೆ ಸೂಚಿಸಲಾಗಿದೆ.

-ಹೆಚ್ಚುತ್ತಿರುವ ಪ್ರಕರಣಗಳಿಗೆ ತಕ್ಕಂತೆ ಹಾಸಿಗೆಗಳ ಲಭ್ಯತೆಯನ್ನು ಖಾತರಿ ಪಡಿಸುವ ನಿಟ್ಟಿನಲ್ಲಿ, ರೋಗ ಲಕ್ಷಣ ಕಡಿಮೆ ಇರುವವರಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಹಾಗೂ ರೋಗ ಲಕ್ಷಣ ಇಲ್ಲದವರಿಗೆ ಖಾಸಗಿ ಹೋಟೆಲ್ ಗಳು ಹಾಗೂ ಹಜ್ ಭವನದಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ.

-ಹಾಸಿಗೆಗಳ ಲಭ್ಯತೆ ಕುರಿತು, ಪ್ರತಿ ರೋಗಿಯ ದಾಖಲಿಸುವ ಕುರಿತು ಕ್ಷಣ ಕ್ಷಣದ ಮಾಹಿತಿ ಒದಗಿಸುವ ಕುರಿತು ಡಿಜಿಟಲ್ ಪ್ಲಾಟ್ ಫಾರ್ಮ್ ಸೃ಼ಜಿಸಲು ನಿರ್ಧರಿಸಲಾಯಿತು.

-ರಾಜ್ಯದಲ್ಲಿ ಶೇ. 61 ರಷ್ಟು ಜನ ಗುಣಮುಖರಾಗಿದ್ದಾರೆ. 3700 ಸಕ್ರಿಯ ಪ್ರಕರಣಗಳು ಇವೆ.

-ಇಲಾಖೆಗಳು ಈ ನಿಟ್ಟಿನಲ್ಲಿ ಸಮನ್ವಯದಿಂದ ಕ್ರಮ ವಹಿಸುವಂತೆ ಸೂಚಿಸಲಾಯಿತು.

-ನಾಳೆ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಸಚಿವರು, ಶಾಸಕರ ಸಭೆ ನಡೆಸಲಾಗುವುದು.

----------------

Highlights of the meeting chaired by Chief Minister regarding Covid 19 situation in Bengaluru city

-Officials were directed to take necessary steps for immediate admission of patients who are tested positive. They should not be kept in waiting for long. Currently 100 ambulance vehicles are available and it was decided to enhance the number as and when required.

-Ministers were directed to hold a meeting with Private Hospitals regarding providing treatment in Private Hospitals.

-To ensure availability of beds in hospital, according to the increase in Covid 19 cases, it was decided to provide treatment to moderately symptomatic in Covid care centres and asymptomatic in Haj Bhavan and Private Hotels.

-It was decided to create a digital platform to provide real time information about availability of beds and details about beds allotted to patients, to avoid any kind of confusions.

-Currently, the recovery rate in the state is 61 per cent and there are only around 3700 active cases.

-Chief Minister directed officials that Departments should work in coordination to reduce inconvenience to people.

*************