ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

know_the_cm

(ಬೆಂಗಳೂರು), ಜುಲೈ 16, 2020

ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಬಾಲ ಕಲಾವಿದೆಯಾಗಿ ರಂಗಭೂಮಿ ಪ್ರವೇಶಿಸಿದ ಸುಭದ್ರಮ್ಮ ಮನ್ಸೂರ್, ಬದುಕಿನ ಏಳುಬೀಳುಗಳ ನಡುವೆಯೂ ವೃತ್ತಿ ರಂಗಭೂಮಿಯಲ್ಲಿ ತಮ್ಮದೇ ಛಾಪು ಮೂಡಿಸಿದವರು.

-ರಕ್ತರಾತ್ರಿ ನಾಟಕದಲ್ಲಿನ ದ್ರೌಪದಿಯ ಪಾತ್ರ, ಕುರುಕ್ಷೇತ್ರ ನಾಟಕದ ಗಾಂಧಾರಿಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಮನೆ ಮಾತಾಗಿದ್ದವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಇವರ ನಿಧನದಿಂದ ರಂಗಭೂಮಿಯು ಅನರ್ಘ್ಯ ರತ್ನವೊಂದನ್ನು ಕಳೆದುಕೊಂಡಂತಾಗಿದೆ.

-ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

*************