ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕನ್ನಡಿಗರ ಹಿತರಕ್ಷಣೆಗೆ ಸರ್ಕಾರ ಬದ್ಧ- ಮುಖ್ಯಮಂತ್ರಿ ಸ್ಪಷ್ಟನೆ

know_the_cm

(ಬೆಂಗಳೂರು), ಆಗಸ್ಟ್ 19, 2019

-“ನಮ್ಮ ಸರ್ಕಾರ ಕನ್ನಡ ಹಾಗೂ ಕನ್ನಡಿಗರ ಹಿತರಕ್ಷಣೆಗೆ ಬದ್ಧವಾಗಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

-ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಿನ್ನೆ ನಡೆದ ಘಟನೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಹೊರತು ಕನ್ನಡ ಪರ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

-“ನಾನು ರೈತರ ಪರ ಇರುವುದು ಎಷ್ಟು ಸತ್ಯವೋ, ಕನ್ನಡಿಗರ ಪರ ಇರುವುದೂ ಅಷ್ಟೇ ಸತ್ಯ. “ಸರ್ವೇಜನಾಃ ಸುಖಿನೋಭವಂತು” ಎನ್ನುವುದೇ ನನ್ನ ಮೂಲಮಂತ್ರ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

know_the_cm

*************