ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಮುಖ್ಯ ಮಂತ್ರಿಗಳು

know_the_cm

(ಬೆಂಗಳೂರು), ಆಗಸ್ಟ್ 07, 2020

-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಕಾರ್ಯದರ್ಶಿಗಳಿಗೆ ಕರೆ ಮಾಡಿ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಅಗತ್ಯ ತುರ್ತು ಕ್ರಮಗಳಿಗೆ ಅವರ ಒಪ್ಪಿಗೆ ಪಡೆಯದೆ ಮುಂದುವರೆಯುವಂತೆ ಸೂಚಿಸಿದರು.

-ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೊಮಣ್ಣ ಅವರೊಂದಿಗೂ ಕರೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು ಕೊಡಗಿನ‌ಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ತಲಕಾವೇರಿಯಲ್ಲಿ ಉಂಟಾದ ಭೂಕುಸಿತದ ಬಗ್ಗೆಯೂ ಮಾಹಿತಿ ಪಡೆದರು. ಭೂಕುಸಿತದ ನಂತರ ನಾಪತ್ತೆಯಾಗಿರುವ ಅರ್ಚಕರ ಕುಟುಂಬದ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಗಳು, ಅವರನ್ನು ಹುಡುಕುವ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಸೂಚಿಸಿದರು.

(ಬೆಂಗಳೂರು), ಆಗಸ್ಟ್ 06, 2020

ಮಳೆಯಿಂದ ಹಾನಿ: ಸಂತ್ರಸ್ತರಿಗೆ ಹಿಂದಿನಂತೆಯೇ ಪರಿಹಾರ ವಿತರಿಸಲು ಮುಖ್ಯಮಂತ್ರಿಗಳ ಸೂಚನೆ

-ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಈ ಹಿಂದಿನ‌ ರೀತಿಯೇ ಪರಿಹಾರವನ್ನು ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.‌

-ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ.ಗಳು ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ.ಗಳ ಪರಿಹಾರ, ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು‌ ಎಂದು ಅವರು ಸೂಚಿಸಿದರು.

-ಜಿಲ್ಲಾ ಕೇಂದ್ರಗಳ ಹಾಸ್ಟೆಲ್, ಶಾಲಾ ಕಾಲೇಜುಗಳು ಕೋವಿಡ್ ಕೇಂದ್ರಗಳಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವುದರಿಂದ ಗ್ರಾಮಗಳಲ್ಲಿರುವ ಶಾಲಾ ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರವಾಗಿ ಮಾರ್ಪಡಿಸಿ ಅಗತ್ಯ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದ್ದಾರೆ.

(ಬೆಂಗಳೂರು), ಆಗಸ್ಟ್ 06, 2020

ರಾಜ್ಯದಲ್ಲಿ ವ್ಯಾಪಕ ಮಳೆ: ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸೂಚನೆ

-ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು‌ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ.

-ಕ್ಷೇತ್ರ ಬಿಟ್ಟು ಹೋಗದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವುದು ಸ್ಥಳದಲ್ಲಿಯೇ ಪರಿಹಾರ ವಿತರಣೆ ಸೇರಿದಂತೆ ಇತರೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

-ಈಗಾಗಲೇ 50 ಕೋಟಿ ಹಣ ಬಿಡುಗಡೆ ಮಾಡಿದ್ದು ಅಗತ್ಯ ಇದ್ದರೆ ಇನ್ನಷ್ಟು ಹಣ ಬಿಡುಗಡೆ ಮಾಡುವುದಾಗಿ ಹೇಳಿದ ಮುಖ್ಯಮಂತ್ರಿಗಳು ಅತಿ ತುರ್ತು ಕೆಲಸಗಳಿಗೆ ನೀವೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.

*************