ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ

know_the_cm

(ಬೆಂಗಳೂರು), ಸೆಪ್ಟೆಂಬರ್ 23, 2020

-ಕೇಂದ್ರ ಸಚಿವ ಶ್ರೀ ಸುರೇಶ್ ಅಂಗಡಿ ರವರ ಅಕಾಲಿಕ ನಿಧನದ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಅವರ ನಿಧನದಿಂದ ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ.

-ಸುರೇಶ್ ಅಂಗಡಿ ಅವರು ಒಬ್ಬ ಸಜ್ಜನ ರಾಜಕಾರಣಿ ಯಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಆಯ್ಕೆಯಾಗಿ ಜನಪ್ರಿಯ ನಾಯಕ ರೆನಿಸಿಕೊಂಡಿದ್ದರು.

-2019ರಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು.

-ಕರ್ನಾಟಕ ರಾಜ್ಯಕ್ಕೆ ಅನೇಕ ರೈಲ್ವೆ ಯೋಜನೆಗಳನ್ನು ತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು.

-ಇತ್ತೀಚೆಗಷ್ಟೆ ಬೆಂಗಳೂರಿಗೆ ಆಗಮಿಸಿ ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರದಲ್ಲಿ ಬಾಕಿ ಇದ್ದ ರಾಜ್ಯದ ಯೋಜನೆಗಳ ಬಗ್ಗೆ ಚರ್ಚಿಸಿ ಅವುಗಳ ಅನುಷ್ಠಾನಕ್ಕೆ ವೇಗ ನೀಡಿದ್ದರು.

-ಅವರ ನಿಧನದಿಂದ ಆತ್ಮೀಯರೊಬ್ಬರನ್ನು ಕಳೆದುಕೊಂಡಂತಾಗಿದೆ.

-“ಶ್ರೀ ಸುರೇಶ್ ಅಂಗಡಿಯವರ ಅಗಲಿಕೆಗೆ ಅತೀವ ಸಂತಾಪವನ್ನು ವ್ಯಕ್ತಪಡಿಸುತ್ತಾ, ಭಗವಂತ ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ, ಅವರ ಕುಟುಂಬದವರಿಗೆ, ಬಂಧು ವರ್ಗದವರಿಗೆ, ಅಪಾರ ಅಭಿಮಾನಿಗಳಿಗೆ ಮತ್ತು ಕಾರ್ಯಕರ್ತರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

*************