ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಶಾಸಕ. ಬಿ. ನಾರಾಯಣರಾವ್ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

know_the_cm

(ಬೆಂಗಳೂರು), ಸೆಪ್ಟೆಂಬರ್ 24, 2020

-ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಶಾಸಕ. ಬಿ. ನಾರಾಯಣರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ನಿನ್ನೆಯಷ್ಟೇ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಕಳೆದುಕೊಂಡಿರುವ ದು:ಖದಿಂದ ಚೇತರಿಸಿಕೊಳ್ಳುವ ಮುನ್ನವೇ ಶಾಸಕ. ಬಿ. ನಾರಾಯಣರಾವ್ ಅವರು ಮೃತಪಟ್ಟಿರುವುದು ಮತ್ತೊಂದು ಆಘಾತ ತಂದಿದೆ.

-2018ರ ವಿಧಾನಸಭೆಯ ಚುನಾವಣೆಯಲ್ಲಿ ಬಸವಕಲ್ಯಾಣ ಕ್ಷೇತ್ರದಿಂದ ಸ್ಪರ್ಧಿಸಿ ನಾರಾಯಣರಾವ್ ಅವರು ಗೆಲುವು ಸಾಧಿಸಿದ್ದರು. ವಿಧಾನಸಭೆಯಲ್ಲಿ ಜ್ವಲಂತ ಸಮಸ್ಯೆಗಳ ಕುರಿತು ಧ್ವನಿ ಎತ್ತುತ್ತಿದ್ದ ಅವರು ಅಸಾಧರಣ ವಾಗ್ಮಿಗಳಾಗಿದ್ದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದು, ಬಸವಕಲ್ಯಾಣ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಅತ್ಯುತ್ತಮ ಶಾಸಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

-ಮೃತರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

*************