ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ನೈಸರ್ಗಿಕ ವಿಪತ್ತು ಪರಾಮರ್ಶೆಗೆ ಮತ್ತು ನೀರಾವರಿ ಯೋಜನೆ/ ನ್ಯಾಯಾಧಿಕರಣ ತೀರ್ಪುಗಳ ಅನುಷ್ಠಾನ ಪರಿಶೀಲನೆಗೆ ಸಚಿವ ಸಂಪುಟ ಉಪಸಮಿತಿ ರಚನೆ...

know_the_cm

(ಬೆಂಗಳೂರು), ಆಗಸ್ಟ್ 27, 2019

ನೈಸರ್ಗಿಕ ವಿಪತ್ತು ಪರಾಮರ್ಶೆಗೆ ಸಚಿವ ಸಂಪುಟ ಉಪಸಮಿತಿ

-ರಾಜ್ಯದಲ್ಲಿನ ಬರ, ಪ್ರವಾಹ ಪರಿಸ್ಥಿತಿ ಹಾಗೂ ಇತರ ನೈಸರ್ಗಿಕ ವಿಪತ್ತುಗಳಿಂದ ಸಂಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಕಂದಾಯ ಸಚಿವ ಆರ್. ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ.

-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ವಸತಿ ಸಚಿವ ವಿ.ಸೋಮಣ್ಣ, ಕಾನೂನು, ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಸಚಿವರಾದ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಈ ಸಮಿತಿಯ ಸದಸ್ಯರಾಗಿರುತ್ತಾರೆ.

-ಈ ಉಪಸಮಿತಿಯು ಆಗಸ್ಟ್ 28 ರಂದು ಮೊದಲ ಸಭೆ ನಡೆಸಲಿದೆ.

--------

ನೀರಾವರಿ ಯೋಜನೆ/ ನ್ಯಾಯಾಧಿಕರಣ ತೀರ್ಪುಗಳ ಅನುಷ್ಠಾನ ಪರಿಶೀಲನೆಗೆ ಸಚಿವ ಸಂಪುಟ ಉಪ ಸಮಿತಿ

-ಕೃಷ್ಣಾ, ಕಾವೇರಿ, ಮಹಾದಾಯಿ ಹಾಗೂ ಇತರ ನೀರಾವರಿ ಯೋಜನೆಗಳ ಅನುಷ್ಠಾನ / ನ್ಯಾಯಾಧಿಕರಣಗಳ ತೀರ್ಪುಗಳ ಅನುಷ್ಠಾನದ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ.

-ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಉಪ ಸಮಿತಿಯ ಸದಸ್ಯರಾಗಿರುತ್ತಾರೆ.

*************