ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಚಿಕ್ಕಮಗಳೂರು ಅಭಿವೃದ್ಧಿ ಕುರಿತು ಮುಖ್ಯಮಂತ್ರಿ ಸಭೆ...

know_the_cm

ಗೃಹಕಚೇರಿ ಕೃಷ್ಣಾ (ಬೆಂಗಳೂರು), ಆಗಸ್ಟ್ 30, 2019

-ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿ ಕುರಿತು ಸಭೆ ನಡೆಸಿದರು.

-ಈ ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬಾಧಿತ ಪ್ರದೇಶಗಳಲ್ಲಿ ಪುನರ್ವಸತಿ ಮತ್ತು ಪರಿಹಾರ ಕಲ್ಪಿಸುವ ಕುರಿತು, ಚಿಕ್ಕಮಗಳೂರು ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ, ಕಿರು ವಿಮಾನ ನಿಲ್ದಾಣ, ಅರಣ್ಯ ವಿಷಯಗಳು, ಕಳಸ ತಾಲ್ಲೂಕು ರಚನೆ, ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ, ಜಲಧಾರೆ ಯೋಜನೆ, ಮಳಲೂರು ಏತ ನೀರಾವರಿ ಯೋಜನೆ, ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿ, ಚಿಕ್ಕಮಗಳೂರು ಹಾಲು ಒಕ್ಕೂಟ ಸ್ಥಾಪನೆ ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು.

-ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಯ ಟೌನ್ ಷಿಪ್ ನ ಕಟ್ಟಡಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಯಾವುದಾದರೂ ತರಬೇತಿ ಕೇಂದ್ರ ಕ್ಯಾಂಪಸ್ ಆಗಿ ರೂಪಿಸುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

-ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಲಧಾರೆ ಯೋಜನೆಯಡಿ 799 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ರೂಪಿಸಿರುವ 616 ಕೋಟಿ ರೂ. ಯೋಜನೆಯ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

-ಸಭೆಯಲ್ಲಿ ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ, ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಹಾಜರಿದ್ದರು.

know_the_cm

*************