ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮಹಾರಾಷ್ಟ್ರ ಮುಖ್ಯಮಂತ್ರಿ ಭೇಟಿ ಮಾಡಿದ ಮುಖ್ಯಮಂತ್ರಿ: ಮಹಾದಾಯಿ, ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಜಂಟಿ ಮನವಿಗೆ ನಿರ್ಧಾರ

know_the_cm

(ಮುಂಬೈ), ಸೆಪ್ಟೆಂಬರ್ 03, 2019

-ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

-ಮಹದಾಯಿ ನದಿ ವಿವಾದ ನ್ಯಾಯಾಧಿಕರಣ ನೀರು ಹಂಚಿಕೆ ಮಾಡಿ ನೀಡಿರುವ ಆದೇಶವನ್ನು ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಮುಖ್ಯಮಂತ್ರಿ ಗಳ ಸಭೆ ನಡೆಸಿ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ನಿರ್ದರಿಸಲಾಯಿತು.

-ಕೃಷ್ಣಾ ನ್ಯಾಯಾದಿಕರಣದ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಸುಪ್ರೀಂ ಕೋರ್ಟ್ನಲ್ಲಿ ಜಂಟಿಯಾಗಿ ಅಫಿಡವಿಟ್ ಸಲ್ಲಿಸಿ ನೀರು ಹಂಚಿಕೆ ಆದೇಶವನ್ನು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಲಾಯಿತು.

-ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಗಾರು ಪ್ರಾರಂಭವಾದ ಕೂಡಲೇ ಕೊಯ್ನಾ ಜಲಾಶಯದಿಂದ ಹಂತ ಹಂತವಾಗಿ ನೀರು ಬಿಡುವಂತೆ ಹಾಗು ಈ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಉನ್ನತ ಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

-ಮುಂಬಯಿ ಬೆಂಗಳೂರು ಕೈಗಾರಿಕಾ ಕಾರಿಡಾರ್ ರಚನೆಗೆ ಈಗಾಗಲೇ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು ಈ ಯೋಜನೆಗೆ ಚಾಲನೆ ನೀಡುವ ಬಗ್ಗೆ ಉಭಯ ಸರ್ಕಾರಗಳು ಜಂಟಿಯಾಗಿ ಮನವಿ ಸಲ್ಲಿಸಲು ನಿರ್ದರಿಸಲಾಯಿತು.

-ಕಳೆದ ಆಗಸ್ಟ್ ನಲ್ಲಿ ಮಹಾರಾಷ್ಟ್ರ ಹಾಗು ಕರ್ನಾಟಕದಲ್ಲಿ ಉದ್ಬವಿಸಿದ ಪ್ರವಾಹ ಪರಿಸ್ಥಿತಿಯ ನಿರ್ವಹಣೆ ಹಾಗು ಪರಿಹಾರ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಅನುದಾನ ಒದಗಿಸುವಂತೆಯು ಎರಡು ರಾಜ್ಯಗಳಿಂದ ಜಂಟಿಯಾಗಿ ಮನವಿ ಸಲ್ಲಿಸಲು ತೀರ್ಮಾನ ಮಾಡಲಾಯಿತು.

-ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗು ಮಹಾರಾಷ್ಟ್ರ ರಾಜ್ಯದ ನೀರಾವರಿ ಸಚಿವರಾದ ಗಿರೀಶ್ ದತ್ತಾತ್ರೇಯ ಮಹಾಜನ್ ಹಾಗು ಇಂಧನ ಸಚಿವರಾದ ಚಂದ್ರಶೇಖರ್ ಕಿಶನ್ ರಾವ್ ಉಪಸ್ಥಿತರಿದ್ದರು.

*************