ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಅಕ್ರಮ ಪಂಪ್ ಸೆಟ್ ಗಳ ವಿದ್ಯುತ್ ಸಂಪರ್ಕಗಳನ್ನು ಸ್ಥಗಿತಗೊಳಿಸಲು ಮುಖ್ಯಮಂತ್ರಿ ಸೂಚನೆ

know_the_cm

ಗೃಹಕಚೇರಿ ಕೃಷ್ಣಾ (ಬೆಂಗಳೂರು), ಸೆಪ್ಟೆಂಬರ್ 05, 2019

-ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪಂಪ್ ಸೆಟ್ ಗಳಿಗೆ ಅಕ್ರಮವಾಗಿ ಅಳವಡಿಸಿರುವ ವಿದ್ಯುತ್ ಸಂಪರ್ಕಗಳನ್ನು ಇನ್ನು ಎರಡು ದಿನಗಳ ಒಳಗೆ ಸ್ಥಗಿತಗೊಳಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

-ತುಂಗಭದ್ರಾ ಎಡದಂಡೆ ನಾಲೆಯ ಮೂಲಕ ರಾಯಚೂರು ಜಿಲ್ಲೆಯ ರಾಯಚೂರು ಮತ್ತು ಮಾನ್ವಿ ತಾಲ್ಲೂಕಿಗಳಿಗೆ ನೀರಿನ ಸೌಲಭ್ಯ ಒದಗಿಸುವ ಕುರಿತಂತೆ ರೈತರ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಇಂದು ಮನವಿ ಸಲ್ಲಿಸಿತು.

-ರೈತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆಯನ್ನು ಪಡೆದು ರೈತರಿಗೆ ನ್ಯಾಯಯುತವಾಗಿ ನೀರು ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮಾನ್ವಿ ಮತ್ತು ರಾಯಚೂರು ತಾಲ್ಲೂಕಿನ 2 ಲಕ್ಷ 40 ಸಾವಿರ ಎಕರೆಗೆ ನೀರಿನ ಕೊರತೆ ನೀಗಿಸಲು ತಕ್ಷಣ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

-ನೀರು ನಿರ್ವಹಣೆ ಮಾಡಲು 80 ಇಂಜಿನಿಯರ್ ಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಹಾಗೂ ರೈತರು ಮಾಡಿದ ಇತರ ಮನವಿಗಳ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

-ಈ ಸಂದರ್ಭದಲ್ಲಿ ಸಂಸದ ರಾಜ ಅಮರೇಶ್ ನಾಯಕ್, ಶಾಸಕರಾದ ಶಿವನಗೌಡ ನಾಯಕ್ , ಶಿವರಾಜ್ ಪಾಟೀಲ್, ವೆಂಕಟಪ್ಪ ನಾಯಕ್, ಬಸವನಗೌಡ ದದ್ದಲ್ ಹಾಗೂ ನಾಡಗೌಡ ಪ್ರತಾಪ್ ಗೌಡ ಪಾಟೀಲ್ , ರೈತ ಮುಖಂಡರುಗಳು ಉಪಸ್ಥಿತರಿದ್ದರು.

*************