ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಅತಿವೃಷ್ಟಿ ಪರಿಹಾರಕ್ಕೆ ಮೊದಲ ಆದ್ಯತೆ: ಮುಖ್ಯಮಂತ್ರಿ ಭರವಸೆ

know_the_cm

(ಹೆಗ್ಗಡದೇವನಕೋಟೆ, ಮೈಸೂರು), ಸೆಪ್ಟೆಂಬರ್ 07, 2019

-ರಾಜ್ಯದಲ್ಲಿ ಅತಿವೃಷ್ಟಿ ಪರಿಹಾರಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

-ಮೈಸೂರಿನ ಹೆಗ್ಗಡದೇವನಕೋಟೆಯ ಕಬಿನಿ ಜಲಾಶಯದ ಸಮೀಪ ಬೀಚನಹಳ್ಳಿ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಅಧ್ಯಯನ ತಂಡ ಅಗಮಿಸಿ ವಾಸ್ತವ ಪರಿಶೀಲಿಸಿ ತೆರಳಿದೆ. ಶೀಘ್ರವೇ ಕೇಂದ್ರ ಸರ್ಕಾರದಿಂದ ಪರಿಹಾರ ದೊರೆಯುವ ನಿರೀಕ್ಷೆ ಇದೆ ಎಂದರು.

-ರಾಜ್ಯ ಭೇಟಿಗೆ ಆಗಮಿಸಿದ್ದ ಪ್ರಧಾನಿಯವರಿಗೆ ರಾಜ್ಯದ ಪರಿಸ್ಥಿತಿ ವಿವರಿಸಲಾಗಿದೆ. ಶೀಘ್ರವೇ ಪರಿಹಾರ ಬಿಡುಗಡೆಯ ನಿರೀಕ್ಷೆಯಲ್ಲಿದ್ದೇವೆ. ರಾಜ್ಯ ಸರ್ಕಾರದಿಂದ ಬೇರೆಲ್ಲಾ ಕೆಲಸಗಳನ್ನು ಬದಿಗೊತ್ತಿ ಅತಿವೃಷ್ಟಿ ಪರಿಹಾರಕ್ಕೆ ಆದ್ಯತೆ ನೀಡಿ ಪರಿಹಾರಕ್ಕೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

-ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇಕೆದಾಟು ಯೋಜನೆಗೆ ಚಾಲನೆ ನೀಡುವ ಕುರಿತು ಮತ್ತೆ ಪ್ರಯತ್ನ ನಡೆಸಲಾಗುವುದು ಎಂದರು.

-ಇದಕ್ಕೂ ಮೊದಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಬೀಚನಹಳ್ಳಿ ಹೆಲಿಪ್ಯಾಡ್ನಲ್ಲಿ ಬರಮಾಡಿಕೊಳ್ಳಲಾಯಿತು.

-ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಲೋಕಸಭಾ ಸದಸ್ಯ ವಿ. ಶ್ರೀನಿವಾಸ ಪ್ರಸಾದ್, ಶಾಸಕ ಅನಿಲ್ ಚಿಕ್ಕಮಾದು ಮತ್ತಿತರರು ಹಾಜರಿದ್ದರು.

know_the_cm

*************